‘ಗೃಹಲಕ್ಷ್ಮಿ’ ರಾಜ್ಯದ ಬಹುತೇಕ ಮನೆಗಳಿಗೆ ತಲುಪಿಲ್ಲ, ಕಾಂಗ್ರೆಸ್ಸಿಗರದು ಬರಿ ಬೂಟಾಟಿಕೆ: ಬಿಜೆಪಿ ಟೀಕೆ

Date:

  • ರಾಜ್ಯದ ಮಹಿಳೆಯರಿಗೆ ಎಂದಿನಂತೆ ಟೋಪಿ ಹಾಕಿದ ಕಾಂಗ್ರೆಸ್‌
  • ‘ಗೃಹಲಕ್ಷ್ಮಿ’ ರಾಜ್ಯದ ಬಹುತೇಕ ಮನೆಗಳಿಗೆ ತಲುಪಿಲ್ಲ: ದೂರು

ಪ್ರತಿ ತಿಂಗಳು ಮನೆ ಯಜಮಾನಿಯ ಅಕೌಂಟ್‌ಗೆ ₹2,000 ಹಾಕುತ್ತೇವೆಂದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌
ಸರ್ಕಾರ, ಈಗ ರಾಜ್ಯದ ಮಹಿಳೆಯರಿಗೆ ಎಂದಿನಂತೆ ಟೋಪಿ ಹಾಕಿದೆ ಎಂದು ಬಿಜೆಪಿ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಗೃಹಶಕ್ತಿ ಯೋಜನೆಯ ಲೋಪದ ಬಗ್ಗೆ ವಾಗ್ದಾಳಿ ನಡೆಸಿ, “ಆಗಸ್ಟ್ ತಿಂಗಳಲ್ಲಿ ಆರಂಭವಾದ ‘ಗೃಹಲಕ್ಷ್ಮಿ’ ರಾಜ್ಯದ ಬಹುತೇಕ ಮನೆಗಳಿಗೆ ತಲುಪಿಲ್ಲ. ಇನ್ನು ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಒಂದೇ ಒಂದು ರೂಪಾಯಿ ಸಹ ಇದುವರೆಗೂ ರಾಜ್ಯದ ಗೃಹಲಕ್ಷ್ಮಿಯರಿಗೆ ಜಮೆಯಾಗಿಲ್ಲ” ಎಂದು ಕುಟುಕಿದೆ.

“ರಾಹುಲ್‌ ಗಾಂಧಿಯವರನ್ನು ಕರೆಸಿ, ಸಿಎಂ ಸಿದ್ದರಾಮಯ್ಯ ಅವರು ಮತ್ತು ಡಿಸಿಎಂ ಡಿಕೆ ಶಿವಕುಮಾರ್‌
ಅವರು ಅಬ್ಬರಿಸಿ ಬೊಬ್ಬಿರಿದು ಭಾಷಣ ಮಾಡಿದ್ದು, ಕೇವಲ ಬೂಟಾಟಿಕೆಗೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ!” ಎಂದು ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಣಕ್ಕಾಗಿ ಪೋಸ್ಟಿಂಗ್ ದಂಧೆ ಮಾಡಿ ಬೀದಿಯಲ್ಲಿ ಮಾನ ಹರಾಜು ಹಾಕಿಕೊಂಡಿದ್ದ ಎಟಿಎಂ ಸರ್ಕಾರ, ಇದೀಗ ಕಂದಾಯ ಇಲಾಖೆಯಲ್ಲಿ ಅಧಿಕಾರಿಗಳಿಗೆ ಬಡ್ತಿ ನೀಡಿ, ಹುದ್ದೆ ನೀಡದೆ ಮನೆಯಲ್ಲಿ ಕೂರಿಸಿದೆ. ಬಡ್ತಿ ನೀಡಿರುವ ಅಧಿಕಾರಿಗಳಿಂದ ಇನ್ನೂ ಕಲೆಕ್ಷನ್ ಆಗಿಲ್ಲವೆಂಬ ಕಾರಣಕ್ಕೆ ಹುದ್ದೆ ನೀಡದೆ ಅರಾಜಕತೆ ಸೃಷ್ಟಿಸಿದೆ. ಸಿದ್ದರಾಮಯ್ಯ ಅವರ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿರುವುದು, ಭ್ರಷ್ಟಾಚಾರದಲ್ಲಿ ಮುಳುಗಿರುವುದರಿಂದಲೇ ಈ ಸ್ಥಿತಿ ಎದುರಾಗಿದೆ” ಎಂದು ಹರಿಹಾಯ್ದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...