ದೇವರಿಗೆ ಜಾತಿ, ಧರ್ಮವಿಲ್ಲ; ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಜಾತಿ, ಧರ್ಮವಿಲ್ಲ. ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

‘ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ ಎನ್ನುವ ಹೇಳಿಕೆಗೆ ಸಂಸದ ಯದುವೀರ ಹಾಗೂ ಪ್ರತಿಪಕ್ಷಗಳ’ ಟೀಕೆಯ ಬಗ್ಗೆ ಕೇಳಿದಾಗ ಪ್ರತಿಕ್ರಿಯೆ ನೀಡಿದ ಅವರು, “ಚಾಮುಂಡೇಶ್ವರಿ ಎಲ್ಲ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು.‌ ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ” ಎಂದರು.

ಎಲ್ಲಿದೆ ನಿಯಮ ತೋರಿಸಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದುಗಳು‌ ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ, ಕ್ರಿಶ್ಚಿಯನ್, ಇಸ್ಲಾಂ ಧರ್ಮಕ್ಕೆ ಸೇರಿಕೊಂಡಿದ್ದಾರೆ. ಇವರನ್ನು ದೇವಾಲಯಕ್ಕೆ ಬರಬೇಡಿ ಎಂದು ಹೇಳಲು ಆಗುತ್ತದೆಯೇ? ತಂದೆ-ತಾಯಿ ಬೇರೆ, ಬೇರೆ ಧರ್ಮಕ್ಕೆ ಸೇರಿರುತ್ತಾರೆ. ಇಂತಹ ಮಕ್ಕಳ ಆಚರಣೆ ಬೇರೆ,‌‌ ಬೇರೆ ಇರುತ್ತದೆ. ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ. ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? ಮುಸ್ಲಿಮರು ಶ್ಲೋಕವೊಂದನ್ನು ಪಠಣ ಮಾಡುವ ವಿಡಿಯೋ ನೋಡಿದೆ. ಅವರು ಸಹ ನಮ್ಮ ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ” ಎಂದು ಹೇಳಿದರು.

“ಮಹಾರಾಜರ ಆಳ್ವಿಕೆ ಕಾಲದಲ್ಲಿಯೂ ವಿದೇಶಗಳಿಂದ ಅತಿಥಿಗಳನ್ನು ದಸರಾಕ್ಕೆ ಆಹ್ವಾನ ಮಾಡುತ್ತಿದ್ದರು. ವಿದೇಶಿ ಧರ್ಮಿಯರೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಚರ್ಚ್,‌ ಮಸೀದಿ, ಜೈನ ಬಸದಿ, ಗುರುದ್ವಾರ ಹೀಗೆ ಎಲ್ಲ ಕಡೆ ನಮ್ಮನ್ನು ಒಳಗೆ ಬಿಡುವುದಿಲ್ಲವೇ. ಈ ಹಿಂದೆ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದರು. ಆದರೆ ಈಗ ಬಾನು ಮುಷ್ತಾಕ್ ಅವರು ಬೆಟ್ಟ ಹತ್ತಬಾರದು,‌ ಉದ್ಘಾಟನೆ ಮಾಡಬಾರದು ಎನ್ನುವುದು ಎಷ್ಟು ಸರಿ” ಎಂದು ಪ್ರಶ್ನಿಸಿದರು.

ಸಂಸದ ಯದುವೀರ್ ಅವರು ತಮ್ಮ ಹೇಳಿಕೆಗೆ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ಅವರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಟ್ಟಿದ್ದಾರಲ್ಲ, ಆದ ಕಾರಣಕ್ಕೆ ಇತಿಹಾಸ ಮರೆತು ಬಿಟ್ಟಿದ್ದಾರೆ. ನಾನೊಬ್ಬ ಹಿಂದೂ. ಆ ಚಾಮುಂಡಿ ತಾಯಿಗೆ ಎರಡು ಸಾವಿರ ಕಾಣಿಕೆ ನೀಡಿ ನಾನು ಹಾಗೂ ಸಿದ್ದರಾಮಯ್ಯ ಅವರು ಈ ಎರಡು ಸಾವಿರವನ್ನು ಎಲ್ಲಾ ತಾಯಂದಿರಿಗೂ ಕೊಡುವ ಶಕ್ತಿ ನೀಡುವಂತೆ ಪ್ರಾರ್ಥನೆ ಸಲ್ಲಿಸಿದೆವು. ಆ ತಾಯಿ ನಮಗೆ ಆಶೀರ್ವಾದ ಮಾಡಿದ್ದಾಳೆ.‌ ಈಗ ಕೇವಲ ಹಿಂದೂಗಳಿಗೆ ಮಾತ್ರ ಹಣ ನೀಡುತ್ತಾ ಇದ್ದೇವಾ? ಪಾರ್ಸಿ, ಸಿಖ್, ಮುಸ್ಲಿಂ, ಜೈನ, ಬೌದ್ಧರಿಗೆ ಹಣ ನೀಡುತ್ತಿಲ್ಲವೇ?” ಎಂದರು.

ಹಿಂದುತ್ವದ ಮೇಲಿನ ದಾಳಿ ಹಾಗೂ ಬಾನು ಮುಷ್ತಾಕ್ ಆಯ್ಕೆಯ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನಾವು ಆಚರಣೆ ಮಾಡುವಷ್ಟು ಹಿಂದೂ ಪದ್ಧತಿಯನ್ನು ಅವರೆಲ್ಲಿ (ಬಿಜೆಪಿ) ಆಚರಣೆ ಮಾಡುತ್ತಾರೆ. ನಾನೇನು ಯಾರ ವಿರುದ್ಧವೂ ಇಲ್ಲ, ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಎಲ್ಲರಿಗೂ ಅವಕಾಶ ಸಿಗಬೇಕು. ಯಾವ ಹಿಂದೂ ದೇವಸ್ಥಾನದಲ್ಲಿ ಬೇರೆ ಧರ್ಮದವರು ಬರಬಾರದು ಎಂದು ಹೇಳಿರುವ ಉದಾಹರಣೆ ಇದ್ದರೆ ತೋರಿಸಿ” ಎಂದು ಹೇಳಿದರು.

ಬಿಜೆಪಿ ರಾಜಕೀಯ ಅಜೆಂಡಾ

“ಇದು ಬಿಜೆಪಿಯ ರಾಜಕೀಯ ಅಜೆಂಡಾ. ಇಂತಹ ಬಿಜೆಪಿ ಅಲ್ಪಸಂಖ್ಯಾತ ಇಲಾಖೆಯನ್ನು ಮುಚ್ಚಿಬಿಡಲಿ. ನಮ್ಮ ದೇಶದ ನಿವಾಸಿಗಳೆಲ್ಲರನ್ನು ನಾವು ಒಪ್ಪಿಕೊಳ್ಳಲೇ ಬೇಕು. ಅವರನ್ನು ದೇಶದಿಂದ ಓಡಿಸಿ ಬಿಡಲು ಆಗುತ್ತದೆಯೇ?” ಎಂದರು.

ಜೆಡಿಎಸ್ ತನ್ನ ಸಾಮಾಜಿಕ ‌ಜಾಲತಾಣದಲ್ಲಿ ನಕಲಿ ಪತ್ರ ಹರಿಬಿಟ್ಟಿರುವ ಬಗ್ಗೆ ಕೇಳಿದಾಗ, “ಅವರು ಯಾವತ್ತಿದ್ದರೂ ಫೇಕ್. ಜೆಡಿಎಸ್ ಎಂದಿಗೂ ಫೇಕ್ ಕೆಲಸಗಳನ್ನೇ ಮಾಡುವುದು. ನಾನು ಹೆದರಿಕೊಂಡು ಬಿಟ್ಟೆ, ರಣಹೇಡಿ ಅಂತಲಾದರೂ ಟೀಕೆ ಮಾಡಿಕೊಳ್ಳಲಿ, ಪರವಾಗಿಲ್ಲ, ಅವರ ದೊಡ್ಡ, ದೊಡ್ಡ ನಾಯಕರುಗಳಿಗೆ ಹೆದರಿಕೊಳ್ಳದವನು ನಾನು. ಈಗ ಈ ಟ್ವೀಟ್ ಗಳಿಗೆ ಹೆದರಿಕೊಳ್ಳುತ್ತೇನೆಯೇ? ವಿಜಯೇಂದ್ರ ಹಾಗೂ ಅಶೋಕ್ ಅವರು ತಮ್ಮ,‌ ತಮ್ಮ ಸಮಾಧಾನಕ್ಕೆ ಮಾತನಾಡುತ್ತಿದ್ದಾರೆ‌” ಎಂದು ಹೇಳಿದರು.

ಧರ್ಮಸ್ಥಳ ಚಲೋ ಬಗ್ಗೆ ಕೇಳಿದಾಗ, “ಅದು ರಾಜಕೀಯದ‌ ಚಲೋ. ಧರ್ಮದ ಚಲೋ ಅಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...