ಸುವರ್ಣ ರಥ ರೈಲು ಪ್ರವಾಸಕ್ಕೆ ಮರು ಚಾಲನೆ, ಎಲ್ಲೆಲ್ಲಿ ಪ್ರವಾಸ?

Date:

ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

ಅವರು ಇಂದು ಯಶವಂತಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ 6 ರಲ್ಲಿ ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಸೇವೆಗಳಿಗೆ ಚಾಲನೆ ನೀಡಿ ಮಾತನಾಡಿ, “ಗೋಲ್ಡನ್ ಚಾರಿಯೇಟ್ ರೈಲು ಸೇವೆಗಳು 2018 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು ಅದನ್ನು ಮರುಚಾಲನೆಗೊಳಿಸಲಾಗಿದೆ. ಈ ರೈಲಿನ ಮಾಲೀಕತ್ವವನ್ನು 50% ಭಾರತೀಯ ರೈಲ್ವೇ, 25% ಪ್ರವಾಸೋದ್ಯಮ ಸಚಿವಾಲಯ ಭಾರತ ಸರ್ಕಾರ ಹಾಗೂ ಕೆಎಸ್‍ಟಿಡಿಸಿಯ 25% ರಷ್ಟು ಷೇರುಗಳ ಮೂಲಕ ರಾಜ್ಯ ಸರ್ಕಾರ ಹೊಂದಿದೆ. ರೈಲಿನ ಒಳಾಂಗಣವನ್ನು ಕಲಾತ್ಮಕವಾಗಿ ನಿರ್ಮಿಸಲಾಗಿದೆ” ಎಂದರು.

“18 ಕೋಚ್‍ಗಳಲ್ಲಿ ಕರ್ನಾಟಕ ಆಳಿದ ರಾಜವಂಶಸ್ಥರುಗಳಾದ ಕದಂಬ, ಹೊಯ್ಸಳ, ವಿಜಯನಗರ ಚಾಲುಕ್ಯರ ಹೆಸರನ್ನು ಇಡಲಾಗಿದೆ. ಊಟ, ವಸತಿಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಗೋಲ್ಡನ್ ಚಾರಿಯೇಟ್ ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ ಪರಂಪರೆಯ ತಾಣಗಳ ಜೊತೆಗೆ ಪಶ್ಚಿಮ ಘಟ್ಟಗಳು, ಪ್ರಾಚೀನ ಕಡಲತೀರಗಳು, ಸಾಂಸ್ಕೃತಿಕ ತಾಣಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತದೆ. ಇದರಿಂದ ರೈಲು ಹೋಟೆಲ್‍ಗಳು, ಕುಶಲಕರ್ಮಿಗಳು, ಪ್ರವಾಸ ನಿರ್ವಾಹಕರಿಗೆ ಆದಾಯ ಕಲ್ಪಿಸಿದಂತಾಗುತ್ತದೆ. ಈ ವಿಶೇಷ ರೈಲು ಪ್ರವಾಸ ಜಾಗತಿಕ ಮಟ್ಟದಲ್ಲಿ ವಿಶ್ವದ ಏಳು ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಗುರುತಿಸಲಾಗಿದ್ದು, ಹಲವಾರು ಪ್ರಶಸ್ತಿ ಪಡೆದುಕೊಂಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ರೈಲಿಗೆ 44 ಸುಸುಜ್ಜಿತ ಕ್ಯಾಬಿನ್‍ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್‍ಗಳು ಭಾರತೀಯ ಮತ್ತು ಅಂತರರಾಷ್ಟ್ರೀಯ ಪಾಕಪದ್ದತಿ ಸೇವೆ ನೀಡುತ್ತದೆ. ಲಾಂಜ್ ಬಾರ್, ಫಿಟ್‍ನೆಸ್ ಸೆಂಟರ್ ಇತರೆ ಸೌಕರ್ಯ ಕಲ್ಪಿಸಲಾಗಿದೆ” ಎಂದರು.

ಎಲ್ಲೆಲ್ಲಿ ಪ್ರವಾಸ

“ಜೂವೆಲ್ ಆಫ್ ಸೌತ್ ಪ್ರವಾಸ ಇದೇ ಡಿಸೆಂಬರ್ 21 ರಿಂದ 26 ರವರೆಗೆ ಬೆಂಗಳೂರಿನಿಂದ ಆರಂಭಗೊಂಡು ಮೈಸೂರು, ಕಾಂಚೀಪುರಂ, ಮಹಾಬಲಿಪುರಂ, ತಂಜಾವೂರು, ಕೊಚ್ಚಿನ್, ಮರಾರಿಕುಲಂಗೆ ತೆರಳಿ ನಂತರ ಬೆಂಗಳೂರಿಗೆ ಹಿಂದಿರುಗುತ್ತದೆ. ಇದು ಐದು ದಿನಗಳ ಪ್ರವಾಸವಾಗಿದ್ದು, ಇದಕ್ಕೆ ತಗಲುವ ವೆಚ್ಚ ಒಬ್ಬರಿಗೆ ರೂ 4,07,700/-, ಪ್ರೈಡ್ ಆಫ್ ಕರ್ನಾಟಕ ಪ್ರವಾಸ ದಿನಾಂಕ: 01-02-2025 ರಿಂದ 06-02-2025 ರವರೆಗೆ ಬೆಂಗಳೂರಿನಿಂದ – ನಂಜನಗೂಡು- ಮೈಸೂರು- ಹಳೇಬೀಡು, ಚಿಕ್ಕಮಗಳೂರು, ಹೊಸಪೇಟೆ-ಗೋವಾ- ಬೆಂಗಳೂರನ್ನು ಒಳಗೊಂಡಿದ್ದು ಇದಕ್ಕೆ ತಗಲುವ ವೆಚ್ಚ 2,71,800 ರೂಪಾಯಿಗಳು. ಸೋಜರ್ನ್ ಆಪ್ ಸೌತ್ ಚಾರ್ಟರ್ಡ್ ಪ್ರವಾಸವನ್ನು 29-12-2024 ರಿಂದ 12-02-2025 ರವರೆಗೆ ಆಯೋಜಿಸಲಾಗಿದೆ” ಎಂದು ವಿವರಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್, ಕೆಎಸ್‍ಟಿಡಿಸಿ ಅಧ್ಯಕ್ಷ ಎಂ.ಶ್ರೀನಿವಾಸ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...