ಪಿಎಸ್‌ಐ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ | 1600 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ

Date:

ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

“ಈ ಹಿಂದಿನ ಸರ್ಕಾರದಲ್ಲಿ 545 ಪಿ.ಎಸ್.ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಸದ್ಯ ಸರ್ಕಾರ 947 ಪಿ.ಎಸ್.ಐ ಹುದ್ದೆಗಳನ್ನು ಭರ್ತಿ ಮಾಡಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ತರಬೇತಿ ಪೂರ್ಣಗೊಂಡ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 42 ಪಿ.ಎಸ್.ಐ ಹುದ್ದೆಗಳ ಪೈಕಿ 32 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್ ಠಾಣೆಗಳಿದ್ದು, 1549 ಹುದ್ದೆಗಳಲ್ಲಿ 1394 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 155 ಹುದ್ದೆಗಳು ಖಾಲಿಯಿವೆ. ಪೊಲೀಸ್ ಠಾಣೆಗಳ ದಿನನಿತ್ಯದ ಕರ್ತವ್ಯಕ್ಕೆ ತೊಂದರೆಯಾಗದಂತೆ 103 ಗೃಹ ರಕ್ಷಕ ಸಿಬ್ಬಂದಿ ನೇಮಿಸಿಕೊಂಡು ಕರ್ತವ್ಯ ಭಾರವನ್ನು ಸರಿದೂಗಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂಬರುವ ದಿನಗಳಲ್ಲಿ ಮಾನದಂಡಗಳನ್ನು ಆಧರಿಸಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಾಪಾಡಲು ಸ್ಪೆಷಲ್ ಆಕ್ಷನ್ ಪೋರ್ಸ್ ಶಿವಮೊಗ್ಗದಲ್ಲಿ ನಿಯೋಜಿಸಲಾಗಿದೆ” ಎಂದು ಪರಮೇಶ್ವರ್ ತಿಳಿಸಿದರು.

ಇದೇ ವೇಳೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು ಸಿಗಂಧೂರು ಉಪ ಪೊಲೀಸ್ ಠಾಣೆಯನ್ನು, ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...