ದೇಶದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಬೆಂಗಳೂರಿನಲ್ಲಿ ನಿರ್ಮಾಣ, ಸರಕಾರ ಅನುಮೋದನೆ

Date:

ಬೆಂಗಳೂರಿನ ದಕ್ಷಿಣ ಹೊರವಲಯದಲ್ಲಿ 100 ಎಕರೆ ಪ್ರದೇಶದಲ್ಲಿ ಕ್ರೀಡಾ ಹಬ್ ನಿರ್ಮಿಸುವ ಕರ್ನಾಟಕ ಗೃಹ ಮಂಡಳಿಯ (ಕೆಎಚ್‌ಬಿ) ಮಹತ್ವಾಕಾಂಕ್ಷೆಯ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. ಈ ಯೋಜನೆಯ ಸಂಪೂರ್ಣ ವೆಚ್ಚವನ್ನು ಗೃಹ ಮಂಡಳಿಯೇ ಭರಿಸಲಿದೆ.

ಗಾರ್ಡನ್‌ ಸಿಟಿ ಕ್ರಿಕೆಟ್ ಪ್ರೇಮಿಗಳ ನಗರ ಎಂದೇ ಹೆಸರುವಾಸಿ. ಭಾರತೀಯ ಕ್ರಿಕೆಟ್‌ನ ಹಲವು ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿರುವ ಬೆಂಗಳೂರಿನಲ್ಲಿ ಈ ಮೂಲಕ ಬೃಹತ್ ಕ್ರಿಕೆಟ್ ಕ್ರೀಡಾಂಗಣವೊಂದು ತಲೆ ಎತ್ತಲಿದೆ.

ಬೊಮ್ಮಸಂದ್ರದ ಸೂರ್ಯ ಸಿಟಿಯಲ್ಲಿ 1,650 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಗಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಈ ಕ್ರೀಡಾ ಸಂಕೀರ್ಣದಲ್ಲಿ 80,000 ಆಸನ ಸಾಮರ್ಥ್ಯದ ಬೃಹತ್‌ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದು ಪೂರ್ಣಗೊಂಡ ನಂತರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಎನಿಸಿಕೊಳ್ಳಲಿದೆ.

ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಕೇವಲ 17 ಎಕರೆ ವಿಸ್ತೀರ್ಣದಲ್ಲಿರುವ ಈ ಕ್ರೀಡಾಂಗಣ ಕೇವಲ 32,000 ಆಸನ ಸಾಮರ್ಥ್ಯವನ್ನು ಮಾತ್ರ ಹೊಂದಿದೆ.

ಕಾಲ್ತುಳಿತ ಘಟನೆ ಸಂಬಂಧ ತನಿಖೆಗೆ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಆಯೋಗವನ್ನು ನೇಮಕ ಮಾಡಲಾಗಿತ್ತು. ಆಯೋಗವು ಈ ಕ್ರೀಡಾಂಗಣವು ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಲು ಅಸುರಕ್ಷಿತ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು. ಅಷ್ಟೇ ಅಲ್ಲದೆ, ಹೆಚ್ಚು ಜನ ಸೇರುವ ಪಂದ್ಯಗಳನ್ನು ಸಾಕಷ್ಟು ಪಾರ್ಕಿಂಗ್ ಮತ್ತು ಜನಸಂದಣಿ ನಿರ್ವಹಣಾ ಸೌಲಭ್ಯಗಳಿರುವ ದೊಡ್ಡ ಮತ್ತು ಸುಸಜ್ಜಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಶಿಫಾರಸನ್ನೂ ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...