ಸರ್ಕಾರದಿಂದ ಹೇಮಾವತಿ ನದಿ ನೀರಿನ ಹೋರಾಟ ಹತ್ತಿಕ್ಕುವ ಕಾರ್ಯ: ಬಿ ವೈ ವಿಜಯೇಂದ್ರ ಆರೋಪ

Date:

ರೈತರ ಹಕ್ಕನ್ನು ಮೊಟಕುಗೊಳಿಸುವ ಕೆಲಸವು ರಾಜ್ಯ ಸರಕಾರಕ್ಕೆ ಶೋಭೆ ತರುವುದಿಲ್ಲ. ರಾಜ್ಯ ಸರಕಾರವು ಹೇಮಾವತಿ ನದಿ ನೀರಿನ ವಿಚಾರದಲ್ಲಿ ರೈತರ ಹೋರಾಟವನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ. ಪೊಲೀಸರ ಮೂಲಕ ಗೂಂಡಾಗರ್ದಿ ಮಾಡಿ ಹೋರಾಟ ಹತ್ತಿಕ್ಕುವ ಕಾರ್ಯ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಯಾರೋ ಒಬ್ಬರೋ ಇಬ್ಬರೋ ಕಲ್ಲು ಹೊಡೆದಿರಬಹುದು; ಅದು ಸರಿ ಎನ್ನುವುದಿಲ್ಲ. ಪೊಲೀಸರು ನಮ್ಮ ರಾಜ್ಯದ ಆಸ್ತಿ. ಆದರೆ, ಯಾರೋ ಒಬ್ಬರೋ ಇಬ್ಬರೋ ಕಲ್ಲು ಹೊಡೆದರೆಂದು ನಮ್ಮ ಕಾರ್ಯಕರ್ತರನ್ನು ಹಾಗೂ ರೈತ ಮುಖಂಡರನ್ನು ಟಾರ್ಗೆಟ್ ಮಾಡಿ, ಅವರನ್ನು ಒಳಗೆ ಹಾಕುವ ಕುತಂತ್ರ ನಡೆಯುತ್ತಿದೆ. ಇದರಿಂದ ಹೇಮಾವತಿ ನದಿ ನೀರಿನ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ತಿಳಿಸಿದರು.

“ಸರಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ- ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ತಿದ್ದಿಕೊಳ್ಳದೆ ಪೊಲೀಸ್ ಮೂಲಕ ಗೂಂಡಾಗಿರಿ ಮಾಡಿದ್ದೇ ಆದರೆ, ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ. ಈ ವಿಷಯವಾಗಿ ನಿನ್ನೆ ರಾತ್ರಿ ರಾಷ್ಟ್ರೀಯ ಮುಖಂಡರ ಜೊತೆ ಚರ್ಚೆ ಮಾಡಿದ್ದೇನೆ. ಇವತ್ತು ನಮ್ಮ ಸಂಸದರು, ಶಾಸಕರು ಪೊಲೀಸ್ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವರ ಗಡೀಪಾರು ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, “ರಾಜ ಮಹಾರಾಜರು ಹಿಂದೆ ನಮ್ಮ ದೇಶವನ್ನು ಆಳಿದ್ದರು. ಆಗ ಪಾಳೇಗಾರರು ಇದ್ದ ಬಗ್ಗೆ ನಾವು ಕೇಳಿದ್ದೇವೆ. ಆ ಪಾಳೇಗಾರಿಕೆಯನ್ನು ಹಂಗಿಸುವಂತೆ ರಾಜ್ಯದ ಕಾಂಗ್ರೆಸ್ ಸರಕಾರವು ಅಧಿಕಾರ ನಡೆಸುತ್ತಿದೆ. ಪ್ರಜಾಪ್ರಭುತ್ವವನ್ನು ಹಂಗಿಸುವಂತೆ ಸಿದ್ದರಾಮಯ್ಯರ ನೇತೃತ್ವದ ಸರಕಾರವು ತುಘಲಕ್ ದರ್ಬಾರ್ ನಡೆಸುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯ ಸರ್ಕಾರದ ‘ಗೃಹ ಆರೋಗ್ಯ’ ಮತ್ತೊಂದು ಗ್ಯಾರಂಟಿ ಯೋಜನೆಯೇ?

“ಕಳೆದ ಕೆಲವು ತಿಂಗಳಿನಿಂದ ಈ ಲಜ್ಜೆಗೆಟ್ಟ ಕಾಂಗ್ರೆಸ್ ಸರಕಾರದ ವರ್ತನೆಯನ್ನು ತಾವು ಗಮನಿಸಿ. ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲವೆಂದು ಜನಾಕ್ರೋಶ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲೇ ಮತ್ತೊಂದು ಕಡೆ ಸರಕಾರದ ಹುಳುಕು ಮುಚ್ಚಿ ಹಾಕಿಕೊಳ್ಳಲು ಇಂಥ ಘಟನೆಗಳು ನಡೆಯುತ್ತಿವೆ. ಸರಕಾರವು ಕೂಡ ಹಿಂದೂ ಕಾರ್ಯಕರ್ತರಿಗೆ ಅಪಮಾನ ಮಾಡಲು ಕುತಂತ್ರ ಮಾಡುತ್ತಿದೆ” ಎಂದು ಆಕ್ಷೇಪಿಸಿದರು.

“ಸುಹಾಸ್ ಹತ್ಯೆ ನಡೆದಾಗ ಗೃಹ ಸಚಿವರು ಸುಹಾಸ್ ಮನೆಗೆ ಹೋಗದಂತೆ ಕೆಲವು ದುಷ್ಟ ಶಕ್ತಿಗಳು ಅವರನ್ನು ತಡೆದಿದ್ದವು. ಸುಹಾಸ್ ಶೆಟ್ಟಿ ಹತ್ಯೆ ಆದಾಗ ಮಹಿಳೆಯರೂ ಅದರಲ್ಲಿ ಭಾಗಿಯಾಗಿದ್ದರು. ಇದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. 3-4 ಜನ ಮಹಿಳೆಯರು ರಸ್ತೆಯಲ್ಲಿ ನಿಂತು ಕೊಲೆಗಡುಕರು, ದೇಶದ್ರೋಹಿಗಳನ್ನು ಕಾರಿನಲ್ಲಿ ಕೂರಿಸಿ, ಪರಾರಿ ಆಗಲು ಸಹಕರಿಸಿದ್ದರು ಎಂದು ವಿವರಿಸಿದರು. ಅದರ ಕುರಿತು ಏನಾಗಿದೆ? ಅವರನ್ನು ಬಂಧಿಸಿದ್ದಾರಾ” ಎಂದು ಪ್ರಶ್ನಿಸಿದರು.

“ನಮ್ಮ ರಾಜ್ಯದಲ್ಲಿ ಚುನಾಯಿತ ಸರಕಾರ ಇದೆ; ಪೊಲೀಸರು ಕಾನೂನು- ಸುವ್ಯವಸ್ಥೆ ಕಾಪಾಡುತ್ತಿದ್ದಾರೆ ಎಂಬ ನಂಬಿಕೆ ಬರುತ್ತಿಲ್ಲ. ಇದರ ನಡುವೆ ಸಂಘ ಪರಿವಾರದ ಹಿರಿಯರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ. ಹಿಂದೂ ಮುಖಂಡರ ವಿರುದ್ಧ ಎಫ್‍ಐಆರ್ ದಾಖಲಿಸಿ, ಕಾರ್ಯಕರ್ತರನ್ನು ಬೆದರಿಸುವ ಕುತಂತ್ರ ನಡೆಯುತ್ತಿದೆ. ಮಧ್ಯರಾತ್ರಿ ಕಾರ್ಯಕರ್ತರ ಮನೆಯ ಬಾಗಿಲು ತಟ್ಟಿ, ಅವರನ್ನು ವಿಚಾರಿಸುತ್ತಿದ್ದಾರೆ. ನಾವು ಪ್ರಜಾಪ್ರಭುತ್ವದಲ್ಲಿ ಇದ್ದೇವಾ?” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...