ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರ ನೇಮಕ, ಸರ್ಕಾರ ಆದೇಶ

Date:

ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರನ್ನು ಮುಂದಿನ ಮೂರು ವರ್ಷದ ಅವಧಿಗೆ ನೇಮಿಸಿ ಶುಕ್ರವಾರ ಸರ್ಕಾರ ಆದೇಶ ಹೊರಡಿಸಿದೆ.

ಮೈಸೂರಿನ ಶಿವಣ್ಣಗೌಡ, ಧಾರವಾಡದ ಡಾ.ಸಿ.ಎಂ.ಕುಂದಗೋಳ, ಕಲಬುರ್ಗಿಯ ಚಂದ್ರಪ್ಪ, ರಾಮನಗರದ ಡಾ.ಜಿ.ಎನ್.ಶ್ರೀಕಂಠಯ್ಯ, ದಕ್ಷಿಣ ಕನ್ನಡದ ಪ್ರತಿಭಾ ಕುಲಾಯಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಜಯಪ್ರಕಾಶ್ ಹೆಗ್ಡೆ ಅವರ ಅವಧಿ ಮುಗಿದ ನಂತರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಸ್ಥಾನ ಖಾಲಿಯಾಗಿತ್ತು. ಬಳಿಕ ಕಳೆದ ಜನವರಿಯಲ್ಲಿ ಹಿರಿಯ ವಕೀಲ ಮತ್ತು ಮಾಜಿ ಅಡ್ವೊಕೇಟ್ ಜನರಲ್ ಮಧುಸೂದನ್ ನಾಯಕ್ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ಮುಂದಿನ ಮೂರು ವರ್ಷಕ್ಕೆ ನೇಮಕ ಮಾಡಲಾಗಿದೆ. ಆದರೆ, ಆಯೋಗದ ಸದಸ್ಯರ ನೇಮಕ ವಿಳಂಬವಾಗಿತ್ತು. ಇದೀಗ ರಾಜ್ಯ ಸರ್ಕಾರ ಐದು ಮಂದಿ ಸದಸ್ಯರನ್ನು ನೇಮಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದ್ದ ಈ ಹಿಂದಿನ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕಾಂಗ್ರೆಸ್ ಸರ್ಕಾರ ಕೈ ಬಿಟ್ಟಿದೆ. ಹಿಂದುಳಿದ ವರ್ಗಗಳ ಜಾತಿ ಮರು ಸಮೀಕ್ಷೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ಹಿನ್ನೆಲೆ ಹೊಸದಾಗಿ ಮರು ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದೆ.

90 ದಿನಗಳಲ್ಲಿ ಮರುಸಮೀಕ್ಷೆ ಕಾರ್ಯ ಮುಗಿಯಬೇಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಎಲ್ಲ ಸದಸ್ಯರನ್ನು ನೇಮಕವನ್ನು ಸರ್ಕಾರ ಮಾಡಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಬಗ್ಗೆ…

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ಅಧ್ಯಯನ ಮಾಡುವ ಒಂದು ಸಂಸ್ಥೆಯಾಗಿದೆ. ಈ ಆಯೋಗವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯಿದೆ, 1995 ರ ಅಡಿಯಲ್ಲಿ ಸ್ಥಾಪಿಸಲಾಗಿದೆ.

ಆಯೋಗದ ಮುಖ್ಯ ಕಾರ್ಯಗಳು

  • ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳನ್ನು ತನಿಖೆ ಮಾಡುವುದು.
  • ಅವರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಧ್ಯಯನ ಮಾಡುವುದು ಮತ್ತು ಶಿಫಾರಸುಗಳನ್ನು ನೀಡುವುದು.
  • ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಲಾದ ಯೋಜನೆಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುವುದು.
  • ಸರ್ಕಾರಕ್ಕೆ ಸಲಹೆ ಮತ್ತು ಮಾರ್ಗದರ್ಶನ ನೀಡುವುದು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...