ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ

Date:

ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು.

ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆ 10 ಲಕ್ಷ ಜನರ ಜೀವನ ಆಸರೆಯಾಗಿದೆ” ಎಂದರು‌.

“ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆ ಎಣ್ಣೆಯನ್ನು ಪ್ರತೀ ಲೀಟರ್‌ಗೆ 35 ರೂ. ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ. ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ” ಎಂದು ಹೇಳಿದರು.

ಮನಸೆಳೆಯುತ್ತಿದೆ ವೈವಿಧ್ಯಮಯ ಮತ್ಸ್ಯಮೇಳ: ಡಿ ಕೆ ಶಿವಕುಮಾರ್

ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ-2025‌ ಮನಸೆಳೆಯುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

“ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ನಿನ್ನೆಯಿಂದ ಆಯೋಜಿಸಿರುವ ಮೂರು ದಿನಗಳ ಈ ಕಾರ್ಯಕ್ರಮವು ಹಲವು ವಿಶೇಷತೆಗಳಿಂದ ಕೂಡಿದೆ. ಮೌಲ್ಯವರ್ಧಿತ ಮೀನಿನ ಉತ್ಪನ್ನಗಳ ತಯಾರಿ, ಮಾರಾಟ, ರಫ್ತು ಮಾಡುವ ಉದ್ದೇಶದಿಂದ ಜನರಿಗೆ ಮೀನಿನ ವಿಶೇಷ ತಿಂಡಿಗಳನ್ನು ಈ ಸಲದ ಮತ್ಸ್ಯಮೇಳದಲ್ಲಿ ಪರಿಚಯಿಸಲಾಗಿದೆ” ಎಂದು ತಿಳಿಸಿದರು.

“ರಾಜ್ಯ ಮೀನುಗಾರಿಕೆ ಇಲಾಖೆಗೆ ಸಂಬಂಧಿಸಿದ ಮಳಿಗೆ ಹತ್ತು ಹಲವು ಮಾಹಿತಿಗಳನ್ನು ತಿಳಿಸಿಕೊಡುತ್ತಿದೆ. ಇಲ್ಲಿ ಯೋಜನೆಗಳು ಅನುಷ್ಠಾನಗೊಂಡಿರುವ ಬಗ್ಗೆಯೂ ವಿಸ್ತೃತ ಮಾಹಿತಿ ಸಿಗಲಿದ್ದು, ಜೊತೆಗೆ ಗಮನ ಸೆಳೆಯುವಂತಹ ಮೀನುಗಾರಿಕೆಯಲ್ಲಿ ಬಳಸುವ ಸಾಧನಗಳನ್ನು ಮಳಿಗೆಯಲ್ಲಿ ವೀಕ್ಷಿಸಬಹುದಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...