ಡಿಕೆ ಶಿವಕುಮಾರ್​ರಿಂದಲೇ ಸರ್ಕಾರ ಬೀಳುತ್ತದೆ: ರಮೇಶ್‌ ಜಾರಕಿಹೊಳಿ

Date:

  • ‘ರಾಜ್ಯದಲ್ಲಿ ಆಪರೇಷನ್ ಕಮಲ ಆಗಲು ಸಾಧ್ಯವಿಲ್ಲ’
  • ‘ಶೆಟ್ಟರ್ ಸರಿಯಾದ ಸಮಯಕ್ಕೆ ನಿರ್ಣಯ ತೆಗೆದುಕೊಳ್ಳುತ್ತಾರೆ’

ರಾಜ್ಯದಲ್ಲಿ ಆಪರೇಷನ್ ಕಮಲ ಆಗಲು ಸಾಧ್ಯವಿಲ್ಲ. ಡಿಕೆ ಶಿವಕುಮಾರ್​ರಿಂದಲೇ ಸರ್ಕಾರ ಬೀಳುತ್ತದೆ. ಮಹಾರಾಷ್ಟ್ರ ಮಾದರಿಯಲ್ಲಿ ಈ ಸರ್ಕಾರ ಬದಲಾಗುವುದು ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು.

ಬಿಜೆಪಿ ಮತ್ತೆ ಆಪರೇಷನ್ ಕಮಲಕ್ಕೆ ಕೈ ಹಾಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಡಿರುವ ಆರೋಪಕ್ಕೆ ರಮೇಶ್ ಜಾರಕಿಹೊಳಿ ಸಿಡಿದೆದ್ದಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.

“ನೋಡುತ್ತೀರಿ, ಒಂದು ರಾತ್ರಿಯಲ್ಲಿ ಎಲ್ಲವೂ ಬದಲಾಗಲಿದೆ. ಅತೀ ಶೀಘ್ರದಲ್ಲಿ ಡಿಕೆ ಶಿವಕುಮಾರ್ ಮಾಜಿ ಮಂತ್ರಿ ಆಗಲಿದ್ದಾರೆ. ರಾಜಕೀಯ ವ್ಯವಸ್ಥೆಯಿಂದ ಇದೆಲ್ಲ ಗೊತ್ತಾಗುತ್ತಿದೆ. ಹೈಕೋರ್ಟ್ ಹಿನ್ನಡೆಯಿಂದ ಅವರು ಮಾಜಿ ಆಗಲಿದ್ದಾರೆ “ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ಹೆಸರು ಕೆಡಿಸುತ್ತಿದೆ. ಡಿಕೆ ಆ್ಯಂಡ್ ಕಂಪನಿ ಆಪರೇಷನ್ ಕಮಲ ಮಾಡುತ್ತಿದೆ. ಆಪರೇಷನ್ ಕಮಲದ ಬಗ್ಗೆ ನಮ್ಮಲ್ಲಿ ಯಾವುದೇ ಚರ್ಚೆ ಆಗಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್‌ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?

“ಡಿಕೆ ಶಿವಕುಮಾರ್ ಸರ್ವಾಧಿಕಾರಿ ಧೋರಣೆ, ಸೊಕ್ಕಿನಿಂದ 2019ರಲ್ಲಿ ಅನಿವಾರ್ಯವಾಗಿ ಆಪರೇಷನ್ ಮಾಡಿದ್ದೆವು. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ವಿರುದ್ಧ ನಮ್ಮ ಸಿಟ್ಟಿಲ್ಲ. ಗ್ಯಾರಂಟಿ ಈಡೇರಿಸಲು ಆಗದಿದ್ದಕ್ಕೆ ಆಪರೇಷನ್ ಕಮಲ ಆರೋಪ ಮಾಡುತ್ತಿದ್ದಾರೆ” ಎಂದು ಹರಿಹಾಯ್ದರು.

ಡಿಕೆ ಶಿವಕುಮಾರ್ ಸಿಡಿ ಮಾಸ್ಟರ್

”ಸಿಡಿ ಮಾಸ್ಟರ್ ಡಿಕೆ ಶಿವಕುಮಾರ್, ಎಲ್ಲರ ಸಿಡಿ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಾನೆ. ಅವನೇನೂ ದೊಡ್ಡವನಲ್ಲ. ಧೈರ್ಯಶಾಲಿ ಅಲ್ಲ ಪುಕ್ಕಲು. ಡಿಕೆ ಶಿವಕುಮಾರ್ ಯಾವಾಗಲೂ ಮೋಸಗಾರ. ಹೋರಾಟ ಮಾಡುವ ಶಕ್ತಿ ಅವನಿಗಿಲ್ಲ” ಎಂದು ಕುಟುಕಿದರು.

“ಜಗದೀಶ್ ಶೆಟ್ಟರ್ ಅವರನ್ನ ನಿನ್ನೆಯೂ ಭೇಟಿ ಮಾಡಿದ್ದೆ. ಶೆಟ್ಟರ್ ಅವರು ಸರಿಯಾದ ಸಮಯಕ್ಕೆ ಸರಿಯಾದ ನಿರ್ಣಯ ತೆಗೆದುಕೊಳ್ಳುತ್ತಾರೆ” ಎನ್ನುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್‌ ಸಿಡಿಸಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...