Breaking News | ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಗೀಕಾರ

Date:

ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ-2025 ( SC Internal Reservation Bill 2025) ಕೊನೆಗೂ ರಾಜ್ಯಪಾಲರು ಅಂಗೀಕರಿಸಿದ್ದಾರೆ.

ಮೀಸಲಾತಿ ವಿಚಾರದಲ್ಲಿ ಒಳ ಪಂಗಡಗಳ ನಡುವೆ ಗೊಂದಲ ಏರ್ಪಟ್ಟಿದ್ದರಿಂದ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ವಿಧೇಯಕಕ್ಕೆ ಸಹಿ ಹಾಕದೆ ಬಾಕಿಯುಳಿಸಿಕೊಂಡಿದ್ದರು. ಆದರೆ, ಇಂದು (ಫೆಬ್ರವರಿ 26) ದಲಿತ ಸಮುದಾಯದ ಸಚಿವರು ರಾಜ್ಯಪಾಲರನ್ನು ಭೇಟಿ ಮಾಡಿ, ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಬಗ್ಗೆ ಪ್ರಸ್ತಾಪಿಸಿ ವಿಧೇಯಕಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯಪಾಲರು ಪರಿಶಿಷ್ಟ ಜಾತಿಗಳ ಮೀಸಲಾತಿ ವಿಧೇಯಕಕ್ಕೆ ಅನುಮೋದನೆ ನೀಡಿದ್ದಾರೆ.

ಕರ್ನಾಟಕ ಅನುಸೂಚಿತ ಜಾತಿಗಳ ಉಪವರ್ಗೀಕರಣ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಅಂಕಿತ ಹಾಕಲು ಈ ಹಿಂದೆ ನಿರಾಕರಿಸಿದ್ದು, ಹಲವು ಸ್ಪಷ್ಟನೆಗಳನ್ನು ಕೋರಿ ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಇದರಿಂದಾಗಿ ರಾಜ್ಯ ಸರ್ಕಾರದ ಒಳಮೀಸಲಾತಿ ಜಾರಿಯ ಆಶಯಕ್ಕೆ ತಾತ್ಕಾಲಿಕ ಧಕ್ಕೆ ಉಂಟಾಗಿತ್ತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಶಿಫಾರಸ್ಸಿನಂತೆ ಶೇ. 6, 6 ಮತ್ತು 5ರ ಅನುಪಾತದಲ್ಲಿ ಕೋಟಾ ನಿಗದಿಪಡಿಸಲಾಗಿತ್ತು, ಆದರೆ ರಾಜ್ಯಪಾಲರು ಜನವರಿ 9 ರಂದೇ ಈ ಕಡತವನ್ನು ವಾಪಸ್ ಕಳುಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಐಟಿ ಸಾಮ್ರಾಜ್ಯದಲ್ಲಿ ‘ಎಐ’ ಭೂಕಂಪ: ಭಾರತಕ್ಕೆ ಕಾದಿವೆಯೇ ಕರಾಳ ದಿನಗಳು?

ಇದೇ ಮಾರ್ಚ್ 6ರರಂದು ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು (ಫೆಬ್ರವರಿ 26) ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಚಿವರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದಲ್ಲಿ ಬಾಕಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಹಾಗೂ ಒಳಮೀಸಲಾತಿ ಜಾರಿ ಕುರಿತು ಗಂಭೀರ ಚರ್ಚೆ ನಡೆಸಲಾಯಿತು. ಒಳಮೀಸಲಾತಿ ವಿಧೇಯಕಕ್ಕೆ ರಾಜಭವನದಲ್ಲಿ ತಡೆ ಉಂಟಾಗಿರುವ ಬಗ್ಗೆ ಚರ್ಚೆ ನಡೆದಿದ್ದು, ಅಂತಿಮವಾಗಿ ಒಳಮೀಸಲಾತಿ ವಿಧೇಯಕಕ್ಕೆ ಕೂಡಲೇ ಅಂಕಿತ ಹಾಕುವಂತೆ ಕೋರಲು ರಾಜ್ಯಪಾಲರ ಬಳಿ ಸಚಿವರ ನಿಯೋಗ ತೆರಳಲು ನಿರ್ಧರಿಸಲಾಗಿತ್ತು.

ಅದರಂತೆ ದಲಿತ ಸಮಯದಾಯದ ಸಚಿವರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಖಾಲಿ ಹುದ್ದೆ ನೇಮಕಾತಿಗೆ ತೊಂದರೆಯಾಗುತ್ತಿದೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿರುವ ಬಗ್ಗೆಯೂ ಪ್ರಸ್ತಾಪಿಸಿ ಒಳಮೀಸಲಾತಿ ವಿಧೇಯಕಕ್ಕೆ ಸಹಿ ಹಾಕುವಂತೆ ಮಾನವಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರು, ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ-2025 ಸಹಿ ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...