ಸರ್ಕಾರದ ಬಳಿ ಹಣ ಇಲ್ಲವೆಂದರೆ ನಾವು ಹಣ ಸಂಗ್ರಹಿಸಿ ವಿಶ್ವವಿದ್ಯಾಲಯ ನಡೆಸುತ್ತೇವೆ: ಆರ್‌ ಅಶೋಕ್

Date:

ವಿಶ್ವವಿದ್ಯಾಲಯ ಮುಚ್ಚುವುದರಿಂದ ಲಾಭವಾಗುತ್ತದೆಯೋ, ನಷ್ಟವಾಗುತ್ತದೆಯೋ ಎಂಬುದು ಬೇಕಿಲ್ಲ. ಇದರಿಂದ ಮಕ್ಕಳಿಗೆ ಏನು ತೊಂದರೆಯಾಗುತ್ತದೆ ಎಂಬ ಬಗ್ಗೆ ಸರ್ಕಾರ ಸ್ಪಷ್ಟಪಡಿಸಲಿ. ನೀರಿಗಾಗಿ ಹೋರಾಟ ಮಾಡುವಂತೆಯೇ, ವಿದ್ಯೆಗಾಗಿ ಮಂಡ್ಯದ ಜನರು ಹೋರಾಟ ಮಾಡಲಿದ್ದಾರೆ. ಸರ್ಕಾರದ ಬಳಿ ಹಣ ಇಲ್ಲವೆಂದರೆ ಅದನ್ನು ನೇರವಾಗಿ ಹೇಳಲಿ. ನಾವೆಲ್ಲರೂ ಹಣ ಸಂಗ್ರಹಿಸಿ ವಿಶ್ವವಿದ್ಯಾಲಯ ನಡೆಸುತ್ತೇವೆ ಎಂದು ಆರ್‌.ಅಶೋಕ್‌ ಹೇಳಿದರು.

ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ವಿಶ್ವವಿದ್ಯಾಲಯಗಳಿಂದ ಲಾಭ ಬರುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚಲಾಗಿದೆ. ಕಾಂಗ್ರೆಸ್‌ ಸರ್ಕಾರ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮಂಡ್ಯ ಜಿಲ್ಲೆ ಶಿಕ್ಷಣದಲ್ಲಿ ಹಿಂದುಳಿದಿದೆ. ಇದಕ್ಕಾಗಿ ಬಿಜೆಪಿ ಸರ್ಕಾರ ಹೊಸ 9 ವಿಶ್ವವಿದ್ಯಾಲಯಗಳನ್ನು ನೀಡಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಅದನ್ನು ಕಿತ್ತುಕೊಂಡಿದೆ. ವಿವಿಗಳನ್ನು ಮುಚ್ಚಲು ರೂಪಿಸಿದ ವರದಿಯಲ್ಲಿ ವಿವಿಗಳು ಲಾಭದಾಯಕವಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರ ಉದ್ದೇಶ. ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಭಿಕ್ಷೆ ಬೇಡುತ್ತಿದ್ದಾರೆ. ಈ ಬಾರಿ 1 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಹಿಂದಿನ ಎಲ್ಲ ಮುಖ್ಯಮಂತ್ರಿಗಳಿಗೆ ಹೋಲಿಸಿದರೆ ಸಿದ್ದರಾಮಯ್ಯ ಅವರೇ ಅತ್ಯಧಿಕ ಸಾಲ ಮಾಡಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಜಿಲ್ಲೆಯಲ್ಲಿ ಒಂದು ವಿಶ್ವವಿದ್ಯಾಲಯವಿದ್ದರೆ ಆ ಜಿಲ್ಲೆ ಶಿಕ್ಷಣದಲ್ಲಿ ಸ್ವಾವಲಂಬಿಯಾಗುತ್ತದೆ.
ಶಿಕ್ಷಣ ಎಂದರೆ ವ್ಯಾಪಾರವಲ್ಲ, ಅದು ನಮ್ಮ ದೇಶದ ಆಸ್ತಿ. ಮುಚ್ಚಿರುವ ಬಾರ್‌ಗಳನ್ನು ತೆರೆದು ವಿವಿಗಳನ್ನು ಮುಚ್ಚಲಾಗುತ್ತಿದೆ. ಎಲ್ಲ ವಿವಿಗಳನ್ನು ನಡೆಸಲು 252 ಕೋಟಿ ರೂ. ಇದ್ದರೆ ಸಾಕು. ಉಚಿತವಾಗಿ 2 ಸಾವಿರ ರೂ. ನೀಡಿ ವಿವಿಗಳನ್ನು ಮುಚ್ಚುತ್ತೇವೆಂದರೆ ಗ್ಯಾರಂಟಿಗೆ ಬೆಲೆ ಇರುವುದಿಲ್ಲ. ಬಿಜೆಪಿ ಸರ್ಕಾರ ವಿಶ್ವವಿದ್ಯಾಲಯಗಳನ್ನು ರೂಪಿಸಿದಾಗ ಹೊಸ ಹುದ್ದೆಗಳನ್ನು ಸೃಷ್ಟಿ ಮಾಡಿರಲಿಲ್ಲ. ಇರುವ ಸಿಬ್ಬಂದಿಯನ್ನೇ ನೇಮಕ ಮಾಡಲಾಗಿತ್ತು” ಎಂದರು.

ಪಾಪರ್‌ ಸರ್ಕಾರ

“ಗ್ಯಾರಂಟಿಗಳಿಂದಾಗಿ ಪಾಪರ್‌ ಆಗಿರುವ ಸರ್ಕಾರ, ವಿವಿಗಳನ್ನು ಮುಚ್ಚಿದೆ. ಮಂಡ್ಯ, ಚಾಮರಾಜನಗರ ಮೊದಲಾದ ಜಿಲ್ಲೆಗಳು ಶಿಕ್ಷಣದಲ್ಲಿ ಮೇಲಕ್ಕೆ ಬರಬೇಕೆಂದು ವಿವಿಗಳನ್ನು ಆರಂಭಿಸಲಾಗಿತ್ತು. ಈಗ ವಿವಿಗಳನ್ನು ಮುಚ್ಚಿ ಅದೇ ಸ್ಥಳದಲ್ಲಿ ಬಾರ್‌ಗಳನ್ನು ಆರಂಭಿಸಬಹುದು. ಸರ್ಕಾರದ ಉದ್ದೇಶ ವಿದ್ಯೆ ನೀಡುವುದೋ ಅಥವಾ ಮದ್ಯ ಹಂಚುವುದೋ ಎಂದು ತಿಳಿಸಬೇಕು” ಎಂದು ಹೇಳಿದರು.

“ಸರ್ಕಾರ ಪಾಪರ್‌ ಆಗಿರುವುದಕ್ಕೆ ಇದಕ್ಕಿಂತ ಹೆಚ್ಚಿನ ಸಾಕ್ಷಿ ಬೇಡ. ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುತ್ತದೆ. ಈಗ ರಾಜ್ಯದ ಪಾಲಿನ ಅನುದಾನ ನೀಡಲು ಇವರಿಗೆ ಸಾಧ್ಯವಾಗುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲವೆಂದಾದರೆ ಹೊಸ ಕಟ್ಟಡಗಳು ಎಲ್ಲಿಂದ ಬಂತು? ಮೂಲಸೌಕರ್ಯ ನೀಡಿಯೇ ವಿವಿಗಳನ್ನು ಆರಂಭಿಸಲಾಗಿತ್ತು. ಆದರೆ ಅದನ್ನು ಮುಂದುವರಿಸಲು ಈಗಿನ ಸರ್ಕಾರಕ್ಕೆ ಸಾಧ್ಯ ಆಗುತ್ತಿಲ್ಲ. ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿ ಸದನದಲ್ಲಿ ಈ ಕುರಿತು ಹೋರಾಟ ಮಾಡಲಾಗುವುದು” ಎಂದರು.

“ಡಿ.ಕೆ.ಶಿವಕುಮಾರ್‌ ಕುಂಭಮೇಳಕ್ಕೆ ಹೋದಾಗ ಕಾಂಗ್ರೆಸ್‌ ಹೈಕಮಾಂಡ್‌ ಏನೂ ಮಾಡಲಿಲ್ಲ. ಪ್ರಧಾನಿಯನ್ನು ಭೇಟಿ ಮಾಡಿದಾಗಲೂ ಏನೂ ಮಾಡಲಿಲ್ಲ. ಉತ್ತರಪ್ರದೇಶದ ಮುಖ್ಯಮಂತ್ರಿಯನ್ನು ಹಾಡಿ ಹೊಗಳಿದರೂ ಸುಮ್ಮನಿದ್ದರು. ಇತ್ತೀಚೆಗೆ ಈಶ ಫೌಂಡೇಶನ್‌ಗೆ ಹೋಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ಗೆ ಧಮ್‌ ಇದ್ದರೆ ಡಿ.ಕೆ.ಶಿವಕುಮಾರ್‌ ಅವರನ್ನು ಅಮಾನತು ಮಾಡಲಿ. ನಾವ್ಯಾರೂ ಡಿ.ಕೆ.ಶಿವಕುಮಾರ್‌ ಅವರನ್ನು ಪಕ್ಷಕ್ಕೆ ಆಹ್ವಾನಿಸಿಲ್ಲ”ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...