ಬರಗಾಲದಲ್ಲಿ ನೀರು ಕೊಡದೇ ಸಾರಾಯಿ ಕುಡಿಸಲು ಮುಂದಾದ ಸರ್ಕಾರ: ಮಾಜಿ ಸಿಎಂ ಬೊಮ್ಮಾಯಿ ಕಿಡಿ

Date:

  • ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾದ ಸರ್ಕಾರ
  • ಸಾರಾಯಿ ಮೂಲಕ ಸರ್ಕಾರದಿಂದ ಮನಿ ರಿಟರ್ನ್ ಪಾಲಿಸಿ

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಗಡಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದ. ಅಕ್ರಮ ತಡೆಯಲಾಗದಿದ್ದರೆ ನಿಮ್ಮ ಇಲಾಖೆ ಮಾಡುವುದಾದರೂ ಏನು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನ ತೋರಿಸುತ್ತದೆ. ಒಂದೆಡೆ ಗ್ಯಾರಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ. ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡ ಹಾಗಿದೆ” ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಪೌರಕಾರ್ಮಿಕರು ಪರಮಶೋಷಿತರು; ಸರ್ಕಾರ, ನಾವು-ನೀವು, ಎಲ್ಲರೂ ಕಾರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ಯಾರಂಟಿ ಯೋಜನೆಯಲ್ಲಿ ಮನೆ ಯಜಮಾನಿ ಹುಡುಕುವ ಹೆಸರಲ್ಲಿ ಅತ್ತೆ ಸೊಸೆ ನಡುವೆ ಜಗಳ ಹಚ್ಚಿರುವ ಸರ್ಕಾರ ಇನ್ನು ಸಾರಾಯಿ ಕುಡಿಯಲು ಹಣಕ್ಕಾಗಿ ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಮುಂದಾಗಿದೆ. ಸರ್ಕಾರ ಆದಾಯ ಗಳಿಸಲು ಮದ್ಯ ಮಾರಾಟ ಮೊರೆ ಹೋದರೆ, ಸರ್ಕಾರದ ಗ್ಯಾರಂಟಿ ಪಡೆಯುವ ಮಹಿಳೆಯರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ. ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರಂಟಿ ಸರ್ಕಾರ” ಎಂದು ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...