ಕಾವೇರಿ ವಿಚಾರ ಹಗುರವಾಗಿ ತೆಗೆದುಕೊಂಡ ಸ‌ರ್ಕಾರ, ಸಮಸ್ಯೆ ಮತ್ತಷ್ಟು ಹೆಚ್ಚಳ: ಬೊಮ್ಮಾಯಿ

Date:

  • ಸಚಿವರ ಹೇಳಿಕೆ ಸಿಡಬ್ಲುಆರ್‌ಸಿ ಮೇಲೆ ಪರಿಣಾಮ ಬೀರುವುದಿಲ್ಲವೇ?
  • ಸಿಡಬ್ಲುಎಂಎ, ಸಿಡಬ್ಲುಆರ್‌ಸಿ ಆದೇಶ ವೈಜ್ಞಾನಿಕವಾಗಿಲ್ಲ: ಬೊಮ್ಮಾಯಿ

ಕಾವೇರಿ ನದಿ ನೀರಿನ ಹಂಚಿಕೆ ವಿಷಯ ಸಿಡಬ್ಲುಆರ್‌ಸಿಯಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಕೆಆರ್‌ಎಸ್‌ಗೆ 10 ಸಾವಿರ ಕ್ಯೂಸೆಕ್ಸ್ ಒಳ ಹರಿವು ಇದೆ ಎಂದು ಹೇಳುವ ಉದ್ದೇಶವೇನಿತ್ತು. ಜಲಸಂಪನ್ಮೂಲ ಸಚಿವರ ಹೇಳಿಕೆಯಿಂದ ಸಿಡಬ್ಲುಆರ್‌ಸಿ ಮೇಲೆ ಪರಿಣಾಮ ಬೀರುವುದಿಲ್ಲವೇ? ಇವರ ಈ ರೀತಿಯ ಹೇಳಿಕೆಯಿಂದಲೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಸಿಡಬ್ಲುಆರ್‌ಸಿ ಮತ್ತೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ಹೇಳಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಏನೇ ಆದೇಶ ಬಂದರೂ ಕೂಡ ರಾಜ್ಯ ಸರ್ಕಾರ ಅದನ್ನು ಒಪ್ಪಬಾರದು. ತಕ್ಷಣ ಸುಪ್ರೀಂ ಕೋರ್ಟ್‌ಗೆ ಐಎ ಹಾಕಬೇಕು” ಎಂದರು.

“ಸಿಡಬ್ಲುಎಂಎ, ಸಿಡಬ್ಲುಆರ್‌ಸಿ ಆದೇಶ ವೈಜ್ಞಾನಿಕವಾಗಿಲ್ಲ. ಅವರು ವಸ್ತುಸ್ಥಿತಿ ಅರಿತು ಆದೇಶ ಮಾಡಬೇಕು. ಅದನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯದ ನಾಯಕತ್ವ ಸರಿಯಾದ ಲೀಡ್ ತೆಗೆದುಕೊಳ್ಳಬೇಕು. ಇವರು ಹಗುರವಾಗಿ ತೆಗೆದುಕೊಂಡಿರುವುದರಿಂದ ಸಮಸ್ಯೆ ಹೆಚ್ಚಾಗುತ್ತಿದೆ. ನಾವೇ ಐಎ ಹಾಕಿದರೆ ನಮ್ಮ ಪರಿಸ್ಥಿತಿ, ಅವರ ಪರಿಸ್ಥಿತಿ ಏನಿದೆ ಅಂತ ಹೇಳಲು ಹೆಚ್ಚು ಅವಕಾಶ ಇರುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದಿಗಿಳಿದು ಹೋರಾಟ

“ರಾಜ್ಯ ಸರ್ಕಾರದ ಗಮನ ಸೆಳೆಯಲು ಬಿಜೆಪಿ ಸೇರಿದಂತೆ ರೈತರು ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಆಚರಣೆ ಮಾಡಿದ್ದೇವೆ. ಆದರೆ, ಈ ಸರ್ಕಾರ ಕೇಳುವ ಸ್ಥಿತಿಯಲ್ಲಿ ಇಲ್ಲ. ಜನರ ಆಕ್ರೋಶ ಸುಪ್ರೀಂ ಕೋರ್ಟ್‌ಗೆ ತಲುಪಿಸಲು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ. ಸರ್ಕಾರ ಕಡಿಮೆ ನೀರು ಹರಿಸುವಂತೆ ಮಾಡಿಸಿದ್ದೇವೆ ಎನ್ನಲು‌ ಇದೇನು ಬಟ್ಟೆ ವ್ಯಾಪಾರವೇ? ಇದು ಕಾವೇರಿ ನೀರಿನ ಸಮಸ್ಯೆ, ಇದು ಗಂಭೀರವಾದ ವಿಚಾರ” ಎಂದರು.

ರಾಜ್ಯದ ಪರ ವಾದ ಮಾಡುತ್ತಿರುವ ವಕೀಲರನ್ನು ಬದಲಾಯಿಸುವ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ವಕೀಲರ ತಂಡ ಬದಲಾವಣೆ ಮಾಡುವ ವಿಚಾರ ಸರ್ಕಾರಕ್ಕೆ ಬಿಟ್ಟದ್ದು, ಅವರ ನಡುವೆ ಏನು ಮಾತುಕತೆಯಾಗಿದೆಯೋ ಗೊತ್ತಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಪ್ರತಿಧ್ವನಿಸುತ್ತಿರುವ ಕಾವೇರಿ ಮನವಿ, ಇನ್ನಾದರೂ ಪ್ರಧಾನಿ ಮಧ್ಯ ಪ್ರವೇಶಿಸಲಿ: ಸಿದ್ದರಾಮಯ್ಯ

ರೈತರು ರಾಜಕಾರಣ ಮಾಡುತ್ತಾರಾ?

ಪ್ರತಿಪಕ್ಷಗಳು ರಾಜಕಾರಣ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ರೈತ ಸಂಘದವರು. ಕನ್ನಡ ಸಂಘದವರು ರಾಜಕಾರಣ ಮಾಡುತ್ತಾರಾ? ನಿಮ್ಮ ಒಕ್ಕೂಟದ ಸ್ನೇಹಿತರ ಹಿತ ಕಾಯುವುದನ್ನು ಬಿಟ್ಟು ರಾಜ್ಯದ ಹಿತ ಕಾಯಿರಿ. ಇವರು ತಮಿಳುನಾಡಿಗೆ ನೀರು ಬಿಟ್ಟು ಈಗ ಪ್ರಧಾನಿ ಮಧ್ಯಸ್ಥಿಕೆ ಕೇಳಿದರೆ ಅದನ್ನು ಹೇಗೆ ಮಾಡಲು ಸಾಧ್ಯವಿದೆ‌. ತಮಿಳುನಾಡು ಇಂಡಿಯಾದಲ್ಲಿದೆ‌. ಕಾಂಗ್ರೆಸ್ ಮಿತ್ರ ಪಕ್ಷವಾಗಿದೆ. ಸೋನಿಯಾ ಗಾಂಧಿ, ಖರ್ಗೆ ಅವರನ್ನು ಕರೆಯಿಸಿ ಮಾತನಾಡಿಸಲಿ. ರಾಜ್ಯ ಸರ್ಕಾರ ತಮಿಳುನಾಡು ಸರ್ಕಾರವನ್ನು ಮಾತುಕತೆಗೆ ಒಪ್ಪಿಸಲಿ” ಎಂದರು.

ಮದ್ಯದ ದರ ಹೆಚ್ಚಳ; ಆದಾಯ ಕಡಿಮೆ

“ರಾಜ್ಯ ಸರ್ಕಾರ ಮದ್ಯದ ಮೇಲೆ ತೆರಿಗೆ ಹೆಚ್ಚಳ ಮಾಡಿದ್ದರಿಂದ ಅಬಕಾರಿ ಆದಾಯ ಕಡಿಮೆಯಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಮದ್ಯದ ದರ ಹೆಚ್ಚಳವಾಗಿದೆ. ಹೀಗಾಗಿ ಗೋವಾ ಹಾಗೂ ಮಹಾರಾಷ್ಟ್ರದಿಂದ ಅಕ್ರಮ ಮದ್ಯ ಸರಬರಾಜಾಗುತ್ತಿದೆ” ಎಂದು ಕಿಡಿ ಕಾರಿದರು.

“ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯ ಮಾರಾಟ ಮಾಡಲು ಹೊರಟಿದ್ದು ದುರದೃಷ್ಟಕರ. ಇವರು ಮದ್ಯದ ಬೆಲೆ ಹೆಚ್ಚಳ ಮಾಡಿದ್ದರಿಂದ ಆದಾಯ ಕಡಿಮೆಯಾಗಿದೆ. ಇವರು ಗೃಹಲಕ್ಷ್ಮಿಗೆ ನೀಡಿದ ಹಣವನ್ನು ವಾಪಸ್ ಪಡೆಯಲು ಈ ಮಾರ್ಗ ಅನುಸರಿಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯ ಹದಗೆಡಿಸುವ ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ ತಕ್ಷಣ ಈ ತೀರ್ಮಾನ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...