ಕೆಪಿಎಸ್‌ಸಿ ಪರೀಕ್ಷೆ ವಿಚಾರದಲ್ಲಿ ಸರ್ಕಾರದ ಹುಡುಗಾಟಿಕೆ ಸರಿಯಲ್ಲ: ಬಿ ವೈ ವಿಜಯೇಂದ್ರ

Date:

ಕೆಪಿಎಸ್‌ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ. ರಾಜ್ಯ ವಿದ್ಯಾರ್ಥಿಗಳ ಒಕ್ಕೂಟವು ಕೆಪಿಎಸ್‌ಸಿಯಲ್ಲಿ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಖಂಡಿಸಿ ಹೋರಾಟ ನಿರತರಾಗಿದ್ದಾರೆ. ರಾಜ್ಯ ಸರಕಾರಕ್ಕೆ ಬುದ್ಧಿ ಹೇಳುವ ದೃಷ್ಟಿಯಿಂದ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ ವೈ ವಿಜಯೇಂದ್ರ ಹೇಳಿದರು.

ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಕೆಪಿಎಸ್‌ಸಿ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಪದೇ ಪದೇ ಪರೀಕ್ಷೆ ಮುಂದೂಡುವುದು, ಪ್ರಶ್ನೆಪತ್ರಿಕೆಗಳ ಸೋರಿಕೆ, ಪ್ರಶ್ನೆಪತ್ರಿಕೆಗಳನ್ನು ಇಂಗ್ಲಿಷ್‍ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಸಮಸ್ರಾರು ವಿದ್ಯಾರ್ಥಿಗಳು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರಕಾರದ ವಿರುದ್ಧ ವಿದ್ಯಾರ್ಥಿಗಳ ಹೋರಾಟ ನಡೆಯುತ್ತಿದೆ” ಎಂದು ವಿವರಿಸಿದರು.

“ನಾನು, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ ಮೊದಲಾದ ಮುಖಂಡರು ಇಲ್ಲಿಗೆ ಬಂದಿದ್ದು, ಹೋರಾಟಕ್ಕೆ ಬೆಂಬಲ ನೀಡಿದ್ದೇವೆ. ಈ ಬೆಂಬಲ ಸಾಂಕೇತಿಕವಲ್ಲ. ರಾಜ್ಯ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾತಿ ಜನಗಣತಿ ಪಗಡೆ ಆಟವಾಗಿ ಪರಿಗಣಿಸಿದ ಸಿಎಂ

“ಜಾತಿ ಜನಗಣತಿಯನ್ನು ಮುಖ್ಯಮಂತ್ರಿಯವರು ಪಗಡೆ ಆಟ ಎಂದು ಪರಿಗಣಿಸಿದಂತಿದೆ. ಯಾವಾಗ ಅವರ ಸಿಎಂ ಕುರ್ಚಿ ಅಲ್ಲಾಡುತ್ತದೋ ಅವಾಗ ಜಾತಿ ಜನಗಣತಿಯನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳುತ್ತಾರೆ. ಕುರ್ಚಿ ಭದ್ರವಾಗುವ ಹಾಗಿದ್ದಾಗ ಅದನ್ನು ಮುಂದೂಡುವುದಾಗಿ ಹೇಳುತ್ತಾರೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

“ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ಒಂದೆಡೆ ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದೆ. ಜಾತಿ ಜನಗಣತಿ ವಿಚಾರದಲ್ಲಿ ಹುಚ್ಚಾಟ ಮಾಡುವುದು ಅಕ್ಷಮ್ಯ ಅಪರಾಧ. ಮುಖ್ಯಮಂತ್ರಿಯ ಸ್ಥಾನದಲ್ಲಿ ಕುಳಿತವರು ಈ ರೀತಿ ಹುಡುಗಾಟಿಕೆ ಮಾಡುವುದು ಸರಿಯಲ್ಲ” ಎಂದರು.

ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಅವರಿಗೆ ನ್ಯಾಯ ಕೊಡಿಸಬೇಕಾಗಿದೆ. ಕನ್ನಡ ಭಾಷೆಯನ್ನೇ ಕೊಲೆ ಮಾಡುವ ಸರಕಾರ ಇದು. ಒಂದು ಸಾರಿ ಆದ ತಪ್ಪು ಮತ್ತೆ ಮರುಕಳಿಸದಂತೆ ತಿದ್ದಿಕೊಳ್ಳುವ ಯೋಗ್ಯತೆಯನ್ನೇ ಕಳೆದುಕೊಂಡಿದೆ. ಮುಖ್ಯಮಂತ್ರಿಗಳು ಯಾಕೆ ಇದರ ಕಡೆ ಗಮನ ಕೊಡುತ್ತಿಲ್ಲ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...