ದೀಪಾವಳಿ 2025 | ರಾಜ್ಯದಲ್ಲಿ ಪಟಾಕಿ ದಾಸ್ತಾನು, ವಿತರಣೆ ನಿಯಮ ಏನು ಹೇಳುತ್ತದೆ?

Date:

ರಾಜ್ಯದಲ್ಲಿ ಈ ಬಾರಿಯೂ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ರಾತ್ರಿ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು ಅದಾದ ಬಳಿಕ ಪಟಾಕಿ ಸಿಡಿಸುವುದನ್ನು ನಿರ್ಬಂಧಿಸಲಾಗಿದೆ.

ಹೆಚ್ಚು ಹೊಗೆ ಮತ್ತು ಶಬ್ಧ ಬರುವ ಪಟಾಕಿಗಳನ್ನು ಸಿಡಿಸುವಂತಿಲ್ಲ. ಈ ಸಂಬಂಧ ನಿಗಾ ವಹಿಸಬೇಕು ಎಂದು ಮಂಡಳಿಯು ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಿದೆ. ಹಾಗೆಯೇ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸರಿಗೆ ನಿರ್ದೇಶಿಸಿದೆ.

ಇದನ್ನು ಓದಿದ್ದೀರಾ? ಕುಟುಂಬದ ದೀಪ ನಂದಿಸಿದ ದೀಪಾವಳಿ; ಪಟಾಕಿ ಸಿಡಿದು ಯುವಕ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಅಕ್ಟೋಬರ್ ಆರಂಭದಲ್ಲೇ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದ್ದು, “ನಿಷೇಧಿಸಿರುವ ಪಟಾಕಿಗಳನ್ನು ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಪರಿಸರ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು” ಎಂದು ತಿಳಿಸಿದೆ.

ರಾಜ್ಯದಲ್ಲಿ ಪಟಾಕಿಗಳನ್ನು ಮಾರಾಟ ಮಾಡಲು ಪ್ರಾಧಿಕಾರಗಳಿಂದ ತಾತ್ಕಾಲಿಕ ಅಥವಾ ಶಾಶ್ವತ ಪರವಾನಗಿಯನ್ನು ಪಡೆಯಬೇಕಾಗುತ್ತದೆ. ತಾತ್ಕಾಲಿಕ ಪರವಾನಗಿಯು 15 ದಿನಗಳಿಂದ ಮಾತ್ರ ನೀಡಲಾಗುತ್ತದೆ. ಇನ್ನು ಪಟಾಕಿ ವಿತರಣೆ ಮಾಡಲೂ ಅವಕಾಶವಿಲ್ಲ. ಬಿಜೆಪಿ ಶಾಸಕ ಮುನಿರತ್ನ ಅವರು ಪಟಾಕಿ ಹಂಚಲು ದಾಸ್ತಾನು ಮಾಡಿಕೊಂಡಿದ್ದಾರೆ ಎಂಬ ಆರೋಪದ ಕಾರಣ ನಿನ್ನೆಯಷ್ಟೇ ಶಾಸಕರ ಕಚೇರಿಗೆ ದಾಳಿ ನಡೆಸಿ ಬೀಗ ಜಡಿಯಲಾಗಿದೆ. “ಪಟಾಕಿ ಹಂಚಲು ಪರವಾನಗಿ ಇರಬೇಕು. ಸುಖಾಸುಮ್ಮನೆ ಪಟಾಕಿ ಹಂಚಲು ಅವಕಾಶವಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಇನ್ನು ನಿಷೇಧಿತ ಪಟಾಕಿಗಳ ಸಂಗ್ರಹ ಮತ್ತು ಮಾರಾಟದ ವಿರುದ್ಧ ಕ್ರಮಕೈಗೊಳ್ಳಲು ಸ್ಥಳೀಯ ಸಂಸ್ಥೆಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ನಗರಪಾಲಿಕೆಗಳು, ಪೊಲೀಸ್ ಆಯುಕ್ತರು, ಪೊಲೀಸ್ ಮಹಾ ನಿರ್ದೇಶಕರು, ಅಗ್ನಿಶಾಮಕ ಮಹಾ ನಿರ್ದೇಶಕರು, ಶಿಕ್ಷಣ, ವಾಣಿಜ್ಯ, ಪಶು ಸಂಗೋಪನೆ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಸಾರಿಗೆ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ ಎಂದು ವರದಿಯಾಗಿದೆ.

ಏನಿದು ಹಸಿರು ಪಟಾಕಿ, ತಜ್ಞರು ಹೇಳುವುದೇನು?

ಸಿಡಿದಾಗ ಹೆಚ್ಚಾಗಿ ಸದ್ದು ಮಾಡದ, ಹೊಗೆ ಬಾರದ ಪಟಾಕಿಯನ್ನು ಹಸಿರು ಪಟಾಕಿ ಎಂದು ಕರೆಯಲಾಗುತ್ತದೆ. ಶೆಲ್ ಗಾತ್ರಕ್ಕಿಂತಲೂ ಸಣ್ಣದಾಗಿರುವ ಈ ಪಟಾಕಿಗಳು ಸಿಡಿದಾಗ ಹೊಗೆ, ಶಬ್ಧದ ಬದಲಾಗಿ ಬೆಳಕು ಬರುತ್ತದೆ. ಶೇಕಡ 40ರಷ್ಟು ಮಾಲಿನ್ಯವನ್ನು ಈ ಪಟಾಕಿಗಳು ತಡೆಯುತ್ತದೆ. ಸಾಮಾನ್ಯವಾಗಿ ಪಟಾಕಿಗಳಲ್ಲಿ ಲೀಥಿಯಂ, ಚಾರ್ಕೋಲ್, ಬೇರಿಯಂ ನೈಟ್ರೇಟ್, ಆರ್ಸೆನಿಕ್, ವಿಷಕಾರಿ ಲೋಹಗಳು ಇರುತ್ತವೆ. ಆದರೆ ಹಸಿರು ಪಟಾಕಿಗಳಲ್ಲಿ ಥರ್ಮೈಟ್ ಮತ್ತು ಅಲ್ಯೂಮಿನಿಯಂ ಹುಡಿಗಳಿರುತ್ತವೆ. ಇವು ನೀರಿನಲ್ಲಿ ಕರಗುತ್ತವೆ.

ಹಸಿರು ಪಟಾಕಿಗಳಲ್ಲಿ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿ (ಸಿಎಸ್‌ಐಆರ್), ರಾಷ್ಟ್ರೀಯ ಪರಿಸರ ಮತ್ತು ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ಹಾಗೂ ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆಯ ಲೋಗೋ ಇರುತ್ತದೆ. ಕ್ಯೂ ಆರ್ ಕೋಡ್ ಕೂಡಾ ಇರುತ್ತದೆ.

ಇದನ್ನು ಓದಿದ್ದೀರಾ? ಕೊಡಗು | ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು

ಆದರೆ ಈ ಹಸಿರು ಪಟಾಕಿಗಳಿಗೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹಸಿರು ಪಟಾಕಿಗಳೂ ರಾಸಾಯನಿಕದಿಂದ ಕೂಡಿರುತ್ತದೆ. ಇದು ಖಂಡಿತವಾಗಿಯೂ ಪರಿಸರಕ್ಕೆ ದುಷ್ಪರಿಣಾಮ ಬೀರುತ್ತವೆ. ಈ ಪಟಾಕಿಗಳು ಉರಿಯಲು, ಸ್ಫೋಟಗೊಳ್ಳಲು, ಹೆಚ್ಚು ಪ್ರಕಾಶಮಾನವಾಗಿ ಕಾಣಲು ಅಪಾಯಕಾರಿ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಹೀಗಾಗಿ ಪಟಾಕಿಗಳನ್ನೇ ನಿಷೇಧಿಸಿದರೆ ಉತ್ತಮ ಎಂದು ಕೆಲವು ಪರಿಸರ ತಜ್ಞರು ಅಭಿಪ್ರಾಯಿಸಿದ್ದಾರೆ.

ಸದ್ದು ಮಾಡಿದ ಪಟಾಕಿ ಅವಘಡಗಳು

ಪ್ರತಿ ವರ್ಷವೂ ದೀಪಾವಳಿ ಬರುತ್ತಿದ್ದಂತೆ ದೇಶದ ಹಲವು ಭಾಗಗಳಲ್ಲಿ ಪಟಾಕಿ ದುರಂತಗಳೂ ಸದ್ದು ಮಾಡುತ್ತವೆ. ಇತ್ತೀಚೆಗೆ ಹಾಸನ ಜಿಲ್ಲೆಯ ಹಳೇಆಲೂರು ಪಟ್ಟಣದಲ್ಲಿ ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮನೆಯಲ್ಲಿ ಅಕ್ರಮವಾಗಿ ಸಿಡಿಮದ್ದು ತಯಾರಿಸುವಾಗ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಇನ್ನು ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ಚತುರ್ಥಿ ಸಂದರ್ಭದಲ್ಲಿ ಪಟಾಕಿ ಸಿಡಿದು ಬಾಲಕನೋರ್ವ ಸಾವನ್ನಪ್ಪಿದ್ದ.

ಇನ್ನು ಅಕ್ಟೋಬರ್ 8ರಂದು ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಭೀಕರ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಆಗಸ್ಟ್ 31ರಂದು ಉತ್ತರ ಪ್ರದೇಶದ ಲಕ್ನೋದಲ್ಲಿರುವ ಮನೆಯೊಳಗಿದ್ದ ಪಟಾಕಿ ಉತ್ಪಾದನಾ ಘಟಕದಲ್ಲಿ ನಡೆದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟು ಐವರು ಗಾಯಗೊಂಡಿದ್ದಾರೆ.

ದೀಪಾವಳಿ: ಕಣ್ಣಿನ ಆಸ್ಪತ್ರೆಗಳ ಸಹಾಯವಾಣಿ

ನಾರಾಯಣ ನೇತ್ರಾಲಯ ರಾಜಾಜಿನಗರ ಶಾಖೆ: 08066121641/1643 ಅಥವಾ 9902546046
ನಾರಾಯಣ ನೇತ್ರಾಲಯ ಎನ್‌ಎಚ್‌ಹೆಲ್ತ್‌ ಸಿಟಿ ಬೊಮ್ಮಸಂದ್ರ:
080 66660658 ಅಥವಾ 9902821128
ನಾರಾಯಣ ನೇತ್ರಾಲಯ ಇಂದಿರಾನಗರ ಶಾಖೆ: 080 66974000 ಅಥವಾ 9916024455
ನಾರಾಯಣ ನೇತ್ರಾಲಯ ಬನ್ನೇರುಘಟ್ಟ ರಸ್ತೆ ಶಾಖೆ: 080 66121618 ಅಥವಾ 9035154170
ನಾರಾಯಣ ನೇತ್ರಾಲಯ ವೈಟ್‌ಫೀಲ್ಡ್ ಶಾಖೆ: 080 66121658 ಅಥವಾ 9535258004
ಡಾ. ಅಗರವಾಲ್ಸ್ ಕಣ್ಣಿನ ಆಸ್ಪತ್ರೆ, ಬನ್ನೇರುಘಟ್ಟ ಶಾಖೆ: 08048193419,
ಡಾ. ಅಗರವಾಲ್ಸ್ ಕಣ್ಣಿನ ಆಸ್ಪತ್ರೆ, ರಾಜರಾಜೇಶ್ವರಿ ನಗರ ಶಾಖೆ: 918048193501
ಶಂಕರ ಕಣ್ಣಿನ ಆಸ್ಪತ್ರೆ ಮಾರತಹಳ್ಳಿ: 08069038900 ಅಥವಾ 9739270477
ಜಯನಗರ ನೇತ್ರಧಾಮ: 080 26088000 ಅಥವಾ 9448071816
ಮಿಂಟೊ ಕಣ್ಣಿನ ಆಸ್ಪತ್ರೆ: 080 26707176 ಅಥವಾ 26706221

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...