ಗೃಹಲಕ್ಷ್ಮಿ | ಸದನಕ್ಕೆ ತಪ್ಪು ಮಾಹಿತಿ, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷ ಸದಸ್ಯರು

Date:

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಬಗ್ಗೆ ಶುಕ್ರವಾರದ ವಿಧಾನಸಭೆ ಅಧಿವೇಶನದಲ್ಲಿ ಗಂಭೀರ ಚರ್ಚೆ ನಡೆದು, ವಿಪಕ್ಷ ಸದಸ್ಯರು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು.

ಗೃಹಲಕ್ಷ್ಮಿ ಯೋಜನೆಯ ಹಣ ಸಮರ್ಪಕವಾಗಿ ವಿತರಣೆ ಆಗುತ್ತಿಲ್ಲ. ಆದರೆ, ಸಚಿವರು ಈ ಕುರಿತಂತೆ ಸುಳ್ಳು ಮಾಹಿತಿ ಕೊಡುತ್ತಿದ್ದಾರೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಸದನದಲ್ಲೇ ಆರೋಪಿಸಿದರು. ವಿಪಕ್ಷ ನಾಯಕ ಆರ್‌ ಅಶೋಕ್‌, ಸದಸ್ಯರಾದ ವಿ ಸುನಿಲ್‌ ಕುಮಾರ್‌ ಹಾಗೂ ಅರವಿಂದ ಬೆಲ್ಲದ ಅವರು ಟೆಂಗಿನಕಾಯಿ ಅವರ ಆರೋಪವನ್ನು ವಿಸ್ತರಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿದ ದಾಖಲೆ ಬಿಡುಗಡೆ ಮಾಡಿದ ಶಾಸಕ ಮಹೇಶ ಟೆಂಗಿನಕಾಯಿ, “ಗೃಹ ಲಕ್ಷ್ಮಿ ಯೋಜನೆಯ ಫೆಬ್ರುವರಿ ಮಾರ್ಚ್ ತಿಂಗಳಿನಲ್ಲಿ ನೀಡಿರುವದಾಗಿ ತಪ್ಪು ಮಾಹಿತಿ ನೀಡಿರುತ್ತಾರೆ. ಗದಗ, ಧಾರವಾಡ, ಹಾವೇರಿ ಜಿಲ್ಲೆಗಳ ಸಂಬಂಧಿತ ಇಲಾಖಾ ಉಪ ನಿರ್ದೇಶಕರು ಫೆಬ್ರವರಿ, ಮಾರ್ಚ್ 2025ರ ಮೊತ್ತ ನೀಡಿಲ್ಲ. ಸಚಿವರು ಈ ವಿಷಯದಲ್ಲಿ ಸದನಕ್ಕೆ ಸುಳ್ಳು ಹೇಳಿದ್ದಾರೆ” ಎಂದು ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುನಿಲ್‌ ಕುಮಾರ್‌ ಮಧ್ಯ ಪ್ರವೇಶಿಸಿ, “ಸಭಾಧ್ಯಕ್ಷರೇ ಪ್ರತಿ ಹಂತದಲ್ಲೂ ಸರ್ಕಾರದ ಸಮರ್ಥನೆಗೆ ಇಳಿಯಬೇಡಿ. ನಮ್ಮ ಕಡೆಯೂ ಗಮನ ಹರಿಸಿ. ಯಾವ ಶಾಸಕರು ಗೈರಾಗಿದ್ದಾರೆ ಎಂದು ಗಮನಕೊಡುವಿರಿ. ಆದರೆ ಸಚಿವರ ಗೈರಿನ ಬಗ್ಗೆ ನೀವು ತುಟಿಯೇ ಬಿಚ್ಚುವುದಿಲ್ಲ. ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಸಚಿವರು ಎಲ್ಲಿದ್ದಾರೆ? ಕನಿಷ್ಠ 9 ಸಚಿವರು ಹಾಜರಿರಬೇಕು ಎಂದು ಹೇಳುತ್ತೀರಿ? ಕಲಾಪದಲ್ಲಿ ಇಬ್ಬರು ಸಚಿವರಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಆರ್‌ ಅಶೋಕ್‌ ಮಾತನಾಡಿ, “ಸದನಕ್ಕೆ ಸಚಿವರು ಸುಳ್ಳು ಉತ್ತರ ನೀಡುತ್ತಾರೆ ಎಂದರೆ ಏನು ಅರ್ಥ. ಮುಖ್ಯಮಂತ್ರಿ ಅವರು ಸಚಿವರ ತಪ್ಪುನ್ನು ಸಮರ್ಥಿಸಿಕೊಂಡು ಹಾರಿಕೆ ಉತ್ತರ ಕೊಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು ಸರಿಯಾಗಿ ಹಣ ಜಮೆ ಆಗುತ್ತಿಲ್ಲ. ಈ ಬಗ್ಗೆ ನಾವು ಗಮನ ಸೆಳೆದರೆ ಅದರಲ್ಲೂ ಸರ್ಕಾರದಿಂದ ಸದನಕ್ಕೆ ತಪ್ಪು ಉತ್ತರ” ಎಂದು ಕುಟುಕಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...