ಲಗ್ನ ಪತ್ರಿಕೆಯಲ್ಲಿ ಮೋದಿಗೆ ಮತ ಹಾಕಿ ಎಂದು ಮುದ್ರಿಸಿದ್ದ ವರನ ವಿರುದ್ಧ ಎಫ್ಐಆರ್

Date:

ಮದುವೆ ಲಗ್ನ ಪತ್ರಿಕೆಯ ಮೂಲಕ ರಾಜಕೀಯ ಪ್ರಚಾರ ಮಾಡಲು ಹೊರಟ ವರನೊಬ್ಬನಿಗೆ ಈಗ ಸಂಕಷ್ಟ ಎದುರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.

ಪೊಲೀಸ್‌ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆಯ ಅಡಿಯಲ್ಲಿ ಮದುವೆ ನರನ ವಿರುದ್ಧ ದೂರು ದಾಖಲಿಸಿದ್ದಾರೆ.

ಮದುವೆ ವರನಿಗೆ ಇವೆಲ್ಲ ಕಾರಣವಾಗಿದ್ದು ಮೋದಿಗೆ ಮತ ಹಾಕಿ ಎಂಬ ಅಡಿಬರಹ.’ ನೀವು ದಂಪತಿಗೆ ಅತ್ಯುತ್ತಮವಾದ ಉಡುಗೊರೆ ನೀಡುವುದೆಂದರೆ ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಚುನಾಯಿಸುವುದು” ಎಂದು ಲಗ್ನ ಪತ್ರಿಕೆಯಲ್ಲಿ ಮುದ್ರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್‌ ವರದಿಯ ಪ್ರಕಾರ ವರನ ಸಂಬಂಧಿಕರೊಬ್ಬರು ಈ ಅಡಿಬರಹ ಮುದ್ರಿಸಿರುವುದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಾಟ್ಸ್ಯಾಪ್ ಯೂನಿವರ್ಸಿಟಿಯ ಭಕ್ತರೂ ಮತ್ತು ಮಹಾಪ್ರಭು ಮೋದಿಯೂ

ದೂರಿನ ಆಧಾರದ ಮೇಲೆ ಚುವಾವಣಾ ಆಯೋಗದ ಅಧಿಕಾರಿಗಳು ಪುತ್ತೂರು ತಾಲೂಕಿನಲ್ಲಿರುವ ವರನ ಮನೆಗೆ ಏ.14ರಂದು ಭೇಟಿ ನೀಡಿದ್ದರು. ಮದುವೆ ಗಂಡು ಮಾರ್ಚ್‌ 1ರಂದು ಚುನಾವಣೆ ದಿನಾಂಕವನ್ನು ಪ್ರಕಟಿಸುವ ಮುನ್ನವೇ ಲಗ್ನ ಪತ್ರಿಕೆಯನ್ನು ಮುದ್ರಿಸಿದ್ದೇವೆ. ಮೋದಿ ಮೇಲಿನ ಪ್ರೀತಿಯಿಂದಾಗಿ ಈ ರೀತಿ ಮಾಡಿದ್ದೇವೆ ಎಂದು ಸ್ಪಷ್ಟೀಕರಣ ನೀಡಿದ್ದ.

ವರನ ಹೇಳಿಕೆಯ ಹೊರತಾಗಿಯೂ ಚುನಾವಣಾ ಆಯೋಗದ ಅಧಿಕಾರಿಗಳು ಉಪ್ಪಿನಂಗಡಿಯ ಪೊಲೀಸ್‌ ಠಾಣೆಗೆ ಏ.26 ರಂದು ದೂರು ನೀಡಿದ್ದು, ಎಫ್‌ಐಆರ್‌ ಕೂಡ ದಾಖಲಿಸಲಾಗಿದೆ. ಲಗ್ನ ಪತ್ರಿಕೆಯನ್ನು ಮುದ್ರಿಸಿಕೊಟ್ಟ ಪ್ರಿಂಟಿಂಗ್‌ ಪ್ರೆಸ್‌ ಮಾಲೀಕನು ಕೂಡ ನೀತಿ ಸಂಹಿತೆಯ ಉಲ್ಲಂಘನೆ ಕಾರಣನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ವಿಚಾರವೆಂದರೆ ಮದುವೆ ಏಪ್ರಿಲ್ 18 ರಂದು ಮುಗಿದು ಹೋಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...