ಗ್ಯಾರಂಟಿಗಳಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಿದೆ: ಸಿಎಂ ಸಿದ್ದರಾಮಯ್ಯ

Date:

ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

2013 ರಿಂದ 2018 ಮತ್ತು 2023ರಿಂದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಇದುವರೆಗೆ ಮಹಿಳೆಯರು 700 ಕೋಟಿ ಪ್ರಯಾಣಗಳನ್ನು ಕೈಗೊಂಡಿದ್ದಾರೆ. ಮಹಿಳಾ ಕೇಂದ್ರಿತ ಯೋಜನೆಗಳಿಂದ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಮಹಿಳೆಯರಿಗೆ ಮಾಸಿಕ 2000 ರೂಗಳನ್ನು ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿ ಸುಧಾರಿಸಿದೆ. ಆರ್ಥಿಕ ಸ್ವಾತಂತ್ರ್ಯದಿಂದ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿ ಲಿಂಗತಾರತಮ್ಯ ಮತ್ತು ಅಸಮಾನತೆ ನಿವಾರಣೆಯಾಗದೇ ಸ್ವಾತಂತ್ರ್ಯ ಸಾರ್ಥಕತೆ ಹೊಂದುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ

ಮಹಿಳೆಯರಲ್ಲಿ ನಾಯಕತ್ವದ ಗುಣ ಬಹಳ ಪ್ರಮುಖವಾಗಿದೆ. ಎಲ್ಲರಿಗೂ ಸಮಾನ ಅವಕಾಶ ದೊರೆತರೆ ಸಮಾನತೆಯನ್ನು ಸಾಧಿಸುವುದು ಸುಲಭವಾಗಿದೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನಲ್ಲಿ 1 ಲಕ್ಷಕ್ಕೂ ಹೆಚ್ಚು ಮಹಿಳಾ ಸದಸ್ಯರು ಇದ್ದು, ಭವಿಷ್ಯದಲ್ಲಿ ಈ ಸಂಖ್ಯೆ 2 ಲಕ್ಷಗಳಿಗೆ ವೃದ್ಧಿಸಬೇಕು. ಉಪಚುನಾವಣೆ ಸಮೀಪಿಸುತ್ತಿರುವುದರಿಂದ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮಹಿಳಾ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ ಮಹಿಳಾ ಸದಸ್ಯರ ಎರಡು ತಂಡಗಳನ್ನು ರಚಿಸಿ , ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಸೂಚಿಸಿದರು. ಕಳೆದ ಬಾರಿ ಚನ್ನಪಟ್ಟಣ, ಶಿಗ್ಗಾಂವ , ಸಂಡೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿತ್ತು. ಈ ಬಾರಿಯೂ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕಿದ್ದು , ಇದಕ್ಕಾಗಿ ಅಗತ್ಯ ಸಿದ್ದತೆಗಳನ್ನು ಕಾಂಗ್ರೆಸ್ ಪಕ್ಷ ಮಾಡಿಕೊಂಡಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...