ಕಾಂಗ್ರೆಸ್‌ನಲ್ಲಿ ಲೆಕ್ಕಕ್ಕಿಲ್ಲದ ನಾಯಕ ಹರಿಪ್ರಸಾದ್‌, ಅವರ ಮಾನಸಿಕ ಸ್ಥಿತಿ ಸರಿ ಇಲ್ಲ: ಗೋವಿಂದ ಕಾರಜೋಳ

Date:

ಬಿಕೆ ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿ ಇಲ್ಲ. ಹೀಗಾಗಿ ಏನೇನೋ ಮಾತನಾಡುತ್ತಾರೆ. ಈಗ ಅವರು ಕಾಂಗ್ರೆಸ್‌ನಲ್ಲಿ ಲೆಕ್ಕಕ್ಕಿಲ್ಲದ ನಾಯಕ. ಅಲ್ಲಿ ಅವರಿಗೆ ಮಾನಸಿಕ ಹಿಂಸೆ ಅಗುತ್ತಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.

ಬಿಜೆಪಿಯವರು ಗೋಡ್ಸೆ ಅನುಯಾಯಿಗಳು ಎಂಬ ಹರಿಪ್ರಸಾದ್‌ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, “ಹರಿಪ್ರಸಾದ್ ಒಬ್ಬ ಹಿರಿಯ ನಾಯಕ. ಆದರೆ ಅವರು ಆ ರೀತಿ ವರ್ತಿಸುತ್ತಿಲ್ಲ. ಅದಕ್ಕೆ ಹೆಚ್ಚು ಬೆಲೆ ಕೊಡುವ ಅಗತ್ಯವಿಲ್ಲ” ಎಂದರು.

“ಈ ರೀತಿ ಮಾತನಾಡಿದರೆ ಹರಿಪ್ರಸಾದ್‌ ದೊಡ್ಡವರಾಗುವುದಿಲ್ಲ. ಇದು ಅವರ ಹೀನ ಸಂಸ್ಕೃತಿ ತೋರಿಸುತ್ತದೆ. ಕಾಂಗ್ರೆಸ್ ನಲ್ಲಿ ಅವರಿಗೆ ಮಾನಸಿಕ ಹಿಂಸೆ ಆಗಿದೆ. ಹಿಂಸೆ ತಾಳಲಾರದೆ ಈ ರೀತಿಯಾಗಿ ಮಾತಾಡುತ್ತಿದ್ದಾರೆ” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯವರು ಬ್ರಿಟಿಷ್ ಬೂಟ್ ನೆಕ್ಕುವವರು ಎಂಬ ಹೇಳಿಕೆಗೆ ಸಹ ಕಿಡಿಕಾರಿದ ಅವರು, “ನಾಲಿಗೆ ಮೇಲೆ ಹಿಡಿತ ಇರಿಸಿಕೊಂಡು ಮಾತನಾಡಬೇಕು. ಅವರ ಮಾತು ಅವರಿಗೆ ಗೌರವ ತರಲ್ಲ. ಇದರಿಂದ ಅವರ ವ್ಯಕ್ತಿತ್ವ ಬೆಳೆಯಲ್ಲ. ಬೂಟು ನೆಕ್ಕುವುದು ಎಂಬ ಹೇಳಿಕೆ ಸರಿಯಲ್ಲ. ಸಜ್ಜನರಿಗೆ ಆದರ್ಶವಾಗಿರಬೇಕು. ಅವರ ಹೀನ ಸಂಸ್ಕ್ರತಿ ತೋರಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, “ಒಬ್ಬ ಹಿರಿಯರು. ಪಕ್ಷದ ನಾಯಕರು ತೆಗೆದುಕೊಂಡ ತೀರ್ಮಾನಕ್ಕೆ ಗೌರವ ಕೊಡಬೇಕು. ಯುವಕರಿಗೆ ಆದ್ಯತೆ ಕೊಡಬೇಕು ಎಂದು ಮಾಡಿದ್ದಾರೆ. ನಾವು ಎಲ್ಲರೂ ಮಾರ್ಗದರ್ಶನ ಮಾಡಬೇಕು. ನಾನು ಎಲ್ಲ ನಾಯಕರ ಪರವಾಗಿ ಕೇಳಿಕೊಳ್ಳುವೆ. ಕಳೆದ ಚುನಾವಣೆಯಲ್ಲಿ ಸ್ವಲ್ಪ ಪಕ್ಷಕ್ಕೆ ಹಿನ್ನಡೆಯಾಗಿದೆ. ಇದು ಸರಿಯಾಗಬೇಕಾಗಿದೆ” ಎಂದು ತಿಳಿಸಿದರು.

ಮಾಜಿ ಸಚಿವ ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಆಗತಾರೆ ಎಂಬ ವಿಚಾರವಾಗಿ ಮಾತನಾಡಿ, “ವಿ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎಂಬುದು ಊಹಾಪೋಹ ಮಾತ್ರ. ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದರಲ್ಲಿ ಕೂರಲು ಯಾರೂ ಬಯಸುವುದಿಲ್ಲ. ದೇಶದಲ್ಲಿ ಪಂಚರಾಜ್ಯಗಳ ಚುನಾವಣೆ ಬಳಿಕ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...