ಹಾಸನ | ಜ.24ಕ್ಕೆ ಜೆಡಿಎಸ್‌ ಬೆಳ್ಳಿಹಬ್ಬ; ಬೃಹತ್‌ ಸಮಾವೇಶಕ್ಕೆ ಎಚ್‌ಡಿಕೆ ಗ್ಯಾಂಗ್ ಸಜ್ಜು

Date:

  • ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಮಾತನಾಡುವಾಗ ಅಡ್ಡ ಬಾಯಿ ಹಾಕಿದ ರೇವಣ್ಣ
  • ರೇವಣ್ಣರನ್ನು ಸನ್ನೆ ಮೂಲಕ ಸುಮ್ಮನಿರಿಸಿದ ಕುಮಾರಸ್ವಾಮಿ

ಕರ್ನಾಟಕ ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾ ದಳ (ಜೆಡಿಎಸ್)ಕ್ಕೆ 25 ವರ್ಷಗಳು ತುಂಬಿರುವ ಹಿನ್ನೆಲೆ ಇದೇ ಜ.24ರಂದು ಹಾಸನದಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಂಡಿರುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ತಿಳಿಸಿದರು.

ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಪಕ್ಷದ ರಾಷ್ಟ್ರಾಧ್ಯಕ್ಷರಾದ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ಮಾರ್ಗರ್ಶನದಂತೆ ಬೃಹತ್‌ ಸಮಾವೇಶ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಬೆಳ್ಳಿಹಬ್ಬ ಆಚರಣೆಗೆ ಚಾಲನೆ ನೀಡಲಾಗಿತ್ತು. ಸಮಾವೇಶದ ಮೂಲಕ, ಸ್ಥಳೀಯ ಸಂಸ್ಥೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ತಯಾರಾಗುವಂತೆ ಸಂದೇಶ ನೀಡಲಾಗುವುದು. ಸಂಭ್ರಮದ ರೀತಿಯಲ್ಲಿ ಈ ಸಮಾವೇಶ ಮಾಡುತ್ತಿದ್ದು, ಕಾರ್ಯಕರ್ತರಲ್ಲಿ ಉತ್ಸಾಹ ಉಂಟಾಗಿದೆ. ಇದೊಂದು ಐತಿಹಾಸಿಕ ಸಮಾವೇಶವಾಗಲಿದೆ” ಎಂದರು.

“ರಾಜ್ಯ ಕಾಂಗ್ರೆಸ್ ಸರ್ಕಾರ ಹಾಸನ ಜಿಲ್ಲೆಯಲ್ಲಿ ಎರಡು ಸಭೆ ನಡೆಸಿದೆ. ಮುಂದಿನ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದಲ್ಲಿ ಕೇವಲ ಹಾಸನ ಜಿಲ್ಲೆಯಿಂದಲೇ ಸುಮಾರು 2 ಲಕ್ಷದವರೆಗೆ ಜನ ಸೇರುವ ನಿರೀಕ್ಷೆ ಇದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶ ಹಾಗೂ ರಾಜ್ಯ ಇಂತಹ ಕೆಟ್ಟ ಸರ್ಕಾರವನ್ನು ನೋಡಲು ಸಾಧ್ಯವಿಲ್ಲ. ಅಧಿಕಾರಿಗಳ ನಡವಳಿಕೆ ವಿಚಾರದಲ್ಲಾಗಿರಲೀ, ಭ್ರಚ್ಟಾಚಾರದಲ್ಲಾಗಲೀ ಚರ್ಚೆಯನ್ನೂ ಮಾಡದ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡಿದೆ. ಭ್ರಷ್ಟ ಅಧಿಕಾರಿಗಳಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಕ್ಷಣೆ ಕೊಡುವಂತಿದೆ. ಈಗ ಐದು ಕಡೆಗಳಲ್ಲಿ ಅಹಿಂದ ಸಮಾವೇಶ ನಡೆಸಲು ಹೊರಟಿದ್ದಾರೆ. 2023 ರಿಂದ 2025ರವರೆಗೆ 3 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ 1,64,000 ಒಬಿಸಿ ಮತ್ತು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವೇ ಸಿಕ್ಕಿಲ್ಲ. ಹಣ ಬಿಡುಗಡೆ ಮಾಡದೇ ವಂಚನೆ ಮಾಡಿದ್ದಾರೆ. ಈ ಸರ್ಕಾರದಿಂದ ಅಹಿಂದ ವರ್ಗಕ್ಕೆ ದ್ರೋಹವಾಗುತ್ತಿದೆ. ಅಹಿಂದ ಹೆಸರನ್ನು ಮುಖ್ಯಮಂತ್ರಿ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಉಪಯೋಗ ಮಾಡಿಕೊಂಡು ಬಂದಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿ: ಹಾಸನ | ಕಾಡಾನೆ ಸಮಸ್ಯೆ ಪರಿಹಾರಕ್ಕಾಗಿ ಸಮನ್ವಯ ಸಮಿತಿ ರಚನೆ

ಇದೇ ವೇಳೆ ನಡುವೆ ಮಾತನಾಡಲು ಮುಂದಾದ ಸಹೋದರ ಎಚ್‌ಡಿ ರೇವಣ್ಣರನ್ನು ಕುಮಾರಸ್ವಾಮಿ ಸನ್ನೆ ಮೂಲಕ ಸುಮ್ಮನಿರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...