ಮೇ 30 ರಂದು ಜರ್ಮನಿಯಿಂದ ಬೆಂಗಳೂರಿಗೆ ವಿಮಾನ ಕಾಯ್ದಿರಿಸಿರುವ ಪ್ರಜ್ವಲ್ ರೇವಣ್ಣ

Date:

ಲೈಂಗಿಕ ಹಗರಣಗಳ ಆರೋಪಿ ಹಾಗೂ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ಮೇ 30 ರಂದು ವಿಮಾನ ಕಾಯ್ದಿರಿಸಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ ಮೇ 31 ರಂದು ಮಧ್ಯರಾತ್ರಿ ಬರುವ ಸಂಭವವಿದೆ. ಈ ಬಗ್ಗೆ ಎಸ್‌ಐಟಿ ತಂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಬಂದಿಳಿದ ತಕ್ಷಣ ಆತನನ್ನು ಬಂಧಿಸಲು ಮೇಲ್ವಿಚಾರಣೆ ನಡೆಸುತ್ತಿದೆ.

ಪ್ರಜ್ವಲ್ ರೇವಣ್ಣನ ವಿರುದ್ಧ ಅತ್ಯಾಚಾರ ಪ್ರಕರಣ ಸೇರಿದಂತೆ ಎರಡು ಪ್ರಕರಣಗಳು ದಾಖಲಾಗಿವೆ. ಹಾಸನದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈತ ಏ.26ರಂದು ಕರ್ನಾಟಕ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಮುಕ್ತಾಯಗೊಂಡ ನಂತರ ಹಾಸನದಿಂದ ಜರ್ಮನಿಗೆ ಪರಾರಿಯಾಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರ ಸುಪರ್ದಿಗೊಪ್ಪಿಸುತ್ತಿದೆಯೇ ಸರಕಾರ?

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಗಳು ಸೇರಿದಂತೆ ನೂರಾರು ಹಗರಣಗಳು ಬೆಳಕಿಗೆ ಬಂದ ತಕ್ಷಣ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಶಿಫಾರಸ್ಸಿನ ಮನವಿಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್‌ಐಟಿ ತಂಡವನ್ನು ರಚಿಸಿದ್ದರು.

ಎರಡು ದಿನಗಳ ಹಿಂದಷ್ಟೆ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದ ಪ್ರಜ್ವಲ್‌ ಮೇ 31 ರಂದು ತನಿಖಾ ತಂಡದ ಮುಂದೆ ಹಾಜರಾಗುವುದಾಗಿ ತಿಳಿಸಿದ್ದ. ಇದಕ್ಕೂ ಮೊದಲು ಎರಡು ಬಾರಿ ಬೆಂಗಳೂರಿಗೆ ಕಾಯ್ದಿರಿಸಿದ್ದ ವಿಮಾನದ ಟಿಕೆಟ್‌ ಅನ್ನು ರದ್ದುಗೊಳಿಸಿದ್ದ.

ಈ ನಡುವೆ ಎಸ್‌ಐಟಿ ತಂಡ ಹಾಸನದ ಪ್ರಜ್ವಲ್‌ ನಿವಾಸದಲ್ಲಿ ಮಂಗಳವಾರ ತನಿಖೆ ಕೈಗೊಂಡು ತಡರಾತ್ರಿಯವರೆಗೂ ಪರಿಶೋಧನೆ ನಡೆಸಿತು. ಈ ಸಂದರ್ಭದಲ್ಲಿ ಕೆಲವು ದೋಷಾರೋಪಣೆಯ ವಸ್ತುಗಳನ್ನು ಕೂಡ ಎಸ್‌ಐಟಿ ತಂಡ ವಶಪಡಿಸಿಕೊಂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...