ಎಚ್‌ಡಿಕೆಯ ಕೇತಗಾನಹಳ್ಳಿ ಜಮೀನು ಒತ್ತುವರಿ ಪ್ರಕರಣ: ಸಮಗ್ರ ವರದಿಗೆ ಹೈಕೋರ್ಟ್ ಆದೇಶ

Date:

ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 6 ಎಕರೆ 6 ಗುಂಟೆ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ರಾಮನಗರ ಜಿಲ್ಲಾಧಿಕಾರಿಗೆ ಹೈಕೋರ್ಟ್‌ ಆದೇಶಿಸಿದೆ.

ಒತ್ತುವರಿ ಆರೋಪದ ತನಿಖೆಗೆ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಿದ ಆದೇಶಕ್ಕೆ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ತಡೆ ಆದೇಶ ತೆರವುಗೊಳಿಸುವಂತೆ ಕೋರಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ರಾಮನಗರ ತಹಶೀಲ್ದಾರ್‌ ಸಲ್ಲಿಸಿರುವ ರಿಟ್‌ ಮೇಲ್ಮನವಿಯನ್ನು ನ್ಯಾಯಮೂರ್ತಿ ಡಿ.ಕೆ.ಸಿಂಗ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ, ‘ಈ ಪ್ರಕರಣದಲ್ಲಿ ಪ್ರತಿವಾದಿ ಎಚ್‌.ಡಿ.ಕುಮಾರಸ್ವಾಮಿ ಹೊಂದಿರುವ 22 ಎಕರೆ ಜಮೀನಿನಲ್ಲಿ 6 ಎಕರೆ 6 ಗುಂಟೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪವಿದೆ’ ಎಂದು ಪುನರುಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಯಾಗಿ ಎಚ್‌.ಡಿ.ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು, ‘ಇದೊಂದು ರಾಜಕೀಯ ಪ್ರೇರಿತ ದೂರು. ದೂರುದಾರ ಜಿ.ಮಾದೇಗೌಡ (ದಿವಂಗತ) ಕುಮಾರಸ್ವಾಮಿ ಅವರ ರಾಜಕೀಯ ಎದುರಾಳಿಯಾಗಿದ್ದವರು. ನಮ್ಮ ಅರ್ಜಿದಾರರು ಹೊಂದಿರುವ ಜಮೀನು ಶುದ್ಧ ಕ್ರಯಪತ್ರ ಹೊಂದಿದೆ. ಒತ್ತುವರಿ ಆಗಿದೆ ಎಂದಾಗಿದ್ದರೆ ಯಾವತ್ತೋ ಅದನ್ನು ಬಿಟ್ಟುಕೊಟ್ಟಿರುತ್ತಿದ್ದರು’ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಬಿಹಾರ ಗೆಲ್ಲಲು ಮೋದಿ ರಣತಂತ್ರ- ಹಣದ ಹೊಳೆ, ಆಶ್ವಾಸನೆಗಳ ಮಳೆ!

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ್‌ ಪ್ರಸಾದ್‌ ಅವರು 2020ರ ಜೂನ್‌ 6ರಂದು ನೀಡಿರುವ ವರದಿ, ರಾಮನಗರ ಜಿಲ್ಲಾಧಿಕಾರಿ 2020ರ ಏಪ್ರಿಲ್‌ 7ರಂದು ನೀಡಿರುವ ವರದಿ ಮತ್ತು ಅಂದಿನ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರು 2021ರ ಮಾರ್ಚ್‌3ರಂದು ನೀಡಿದ್ದ ವರದಿಗಳೆಲ್ಲಾ ಕುಮಾರಸ್ವಾಮಿ ಅವರ ಪರವಾಗಿವೆ’ ಎಂದರು.

ಪ್ರಕರಣದ ಇತರೆ ಪ್ರತಿವಾದಿಗಳಾದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರ ಪತ್ನಿ ಕೆ.ಜಿ.ಪ್ರಮೀಳಾ ಹಾಗೂ ಪುತ್ರ ಡಿ.ಟಿ ಸಂತೋಷ್‌ ಪರ ವಾದ ಮಂಡಿಸಿದ ಹೈಕೋರ್ಟ್‌ನ ಹಿರಿಯ ವಕೀಲ ಟಿ.ಸುನಿಲ್‌ ರಾವ್‌ ‘ಎಸ್‌ಐಟಿ ಕೊಟ್ಟಿರುವ ನೋಟಿಸ್‌ ಸಾಂವಿಧಾನಿಕವಾಗಿ ತಪ್ಪು ನಡೆಯಿಂದ ಕೂಡಿದೆ’ ಎಂದು ಪ್ರತಿಪಾದಿಸಿದರು.

ಕೆಲಕಾಲ ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ವಿವಾದಿತ ಜಮೀನಿಗೆ ಸಂಬಂಧಿಸಿದಂತೆ ರಾಮನಗರ ಜಿಲ್ಲಾಧಿಕಾರಿ ಸಮಗ್ರ ವರದಿ ಸಲ್ಲಿಸಬೇಕು’ ಎಂದು ನಿರ್ದೇಶಿಸಿತು. ಅಂತೆಯೇ, ಈ ಹಿಂದಿನ ವಿಚಾರಣೆಯಲ್ಲೇ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆ ಆದೇಶವನ್ನು ಇದೇ 27ರವರೆಗೆ ವಿಸ್ತರಿಸಿ ವಿಚಾರಣೆ ಮುಂದೂಡಿತು. ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್ ಕಿರಣ್‌ ವಿ.ರೋಣ, ಮಹಮ್ಮದ್‌ ಜಾಫರ್‌ ಶಾ ಮತ್ತು ಕುಮಾರಸ್ವಾಮಿ ಪರ ವಕಾಲತ್ತು ವಹಿಸಿರುವ ಹೈಕೋರ್ಟ್‌ ವಕೀಲ ಎ.ವಿ.ನಿಶಾಂತ್‌ ಹಾಜರಿದ್ದರು.

ಪ್ರಕರಣವೇನು?:

‘ಎಚ್‌.ಡಿ.ಕುಮಾರಸ್ವಾಮಿ, ಅವರ ಸಂಬಂಧಿಯೂ ಆದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಸೇರಿದಂತೆ ಇತರರು‌ ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ವೇ ನಂಬರ್‌ 8, 9, 10, 16, 17 ಮತ್ತು 79ರಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು 2020ರಲ್ಲಿ ಹೈಕೋರ್ಟ್‌ ಆದೇಶಿಸಿತ್ತು.

‘ಈ ಆದೇಶವನ್ನು ಜಾರಿಗೊಳಿಸಿಲ್ಲ’ ಎಂದು ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್.ಹಿರೇಮಠ ಅವರು, ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ನಲ್ಲಿ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಐಎಎಸ್‌ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ಎಸ್‌ಐಟಿ ರಚಿಸಿ 2025ರ ಜನವರಿ 28ರಂದು ಆದೇಶಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...