ವಿಧಾನ ಮಂಡಲದಲ್ಲಿ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

Date:

ವಿಧಾನಮಂಡಳಗಳಲ್ಲಿ ನಡೆಯುವ ಸಮಾಜಮುಖಿ ಹಾಗೂ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಹೊಟೇಲ್ ತಾಜ್ ನಲ್ಲಿ ಕಳೆದ ಮೂರು ದಿನಗಳಿಂದ ನಡೆದ 11 ನೇ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA) ಭಾರತ ವಲಯದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ” ವಿಧಾನ ಮಂಡಳದ ಚರ್ಚೆಗಳು ಜನರ ವಿಶ್ವಾಸ ಗಳಿಸುವುದರೊಂದಿಗೆ ಜನರ ಅಶೋತ್ತರಗಳನ್ನು ಈಡೆರಿಸುವಲ್ಲಿಯ ಪಾತ್ರ” ಕುರಿತ ವಿಚಾರ ಮಂಡಿಸಿದ ಬಸವರಾಜ ಹೊರಟ್ಟಿ, ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕ ಕಾಳಜಿಗಳನ್ನು ಚರ್ಚಿಸಲು ಸರ್ಕಾರಿ ನೀತಿಗಳನ್ನು ಪರಿಶೀಲಿಸಲು ಮತ್ತು ಕಾನೂನು ರಚನೆಯ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಿಧಾನ ಮಂಡಳ ಪರಿಣಾಮಕಾರಿ ವೇದಿಕೆಯಾಗಿದು ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಜನಪ್ರತಿನಿಧಿಗಳು ಮುಂದಾಗಬೇಕು ಎಂದರು.

ಸದನವು ಕ್ರಮಬದ್ಧವಾಗಿಲ್ಲದಿದ್ದಾಗ ಮತ್ತು ಅರ್ಥಪೂರ್ಣ ಚರ್ಚೆಯಿಲ್ಲದೆ ಕಾನೂನುಗಳನ್ನು ಅಂಗೀಕರಿಸಿದಾಗ ನಮ್ಮ ಮೇಲಿನ ಜನರ ನಂಬಿಕೆಗಳು ಕ್ಷೀಣಿಸುವ ಸಂದರ್ಭ ಬರಬಹುದೆನ್ನುವ ಎಚ್ಚರಿಕೆ ಜನಪ್ರತಿನಿಧಿಗಳಿಗಿರಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮು ರಾಜಕಾರಣ: ಒಡೆದ ಮನೆಯಲ್ಲಿ ಹಿಂದುತ್ವಕ್ಕೆ ಒಡೆಯನಾರು?

ಸದನ ಕಲಾಪಗಳ ಪ್ರಧಾನ ಅಂಶಗಳಾದ ಪ್ರಶ್ನೋತ್ತರ ಅವಧಿ, ಶೂನ್ಯವೇಳೆ ಚರ್ಚೆ, ಅರ್ಧಗಂಟೆಯ ಚರ್ಚೆ, ಕಿರುಸೂಚನೆ ಪ್ರಶ್ನೆಗಳು ಮತ್ತು ಸದನದ ಗಮನ ಸೆಳೆಯುವ ಪ್ರಸ್ತಾವಗಳ ಮೂಲಕ ಪ್ರತಿಯೊಬ್ಬ ಸದಸ್ಯರು ಸದನದಲ್ಲಿನ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಮೂಲಕ ಸುಗಮ ಮತ್ತು ರಾಜತಾಂತ್ರಿಕ ಮಾರ್ಗಗಳನ್ನು ಪ್ರತಿನಿಧಿಗಳು ಯಾವಾಗಲೂ ಆಯ್ಕೆ ಮಾಡಿಕೊಳ್ಳಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಶಾಸಕಾಂಗ ಸದನಗಳಲ್ಲಿ ನನ್ನ 45 ವರ್ಷಗಳ ಅವಧಿಯಲ್ಲಿ ವಿಧಾನ ಪರಿಷತ್ತಿನ ಸಭಾಪತಿಯಾಗಿ 3ನೇ ಬಾರಿಗೆ ಪಡೆದ ಅನುಭವದ ಮೂಲಕ ಹೇಳುವುದಾದರೆ, ಸಾರ್ವಜನಿಕ ಪ್ರತಿನಿಧಿಗಳು ಜನಪರ ಮಹತ್ವದ ವಿಷಯಗಳಿಗೆ ಮಹತ್ವ ನೀಡುವುದರ ಮೂಲಕ ತಮ್ಮ ಜವಾಬ್ದಾರಿ ನಿಭಾಯಿಸಬೇಕು ಎಂದು ಹೊರಟ್ಟಿ ನುಡಿದರು.

ಈ ಸಂದರ್ಭದಲ್ಲಿ ಕಳೆದ ಸತತ 45 ವರ್ಷಗಳಿಂದ ರಾಜ್ಯ ವಿಧಾನಪರಿಷತ್ ಸದಸ್ಯರಾಗಿ ಹಾಗೂ ಹಲವು ಬಾರಿ ಸಭಾಪತಿಗಳಾಗಿ ಸೇವೆ ಸಲ್ಲಿಸಿ ಹಲವಾರು ದಾಖಲೆಗಳಿಗೆ ಭಾಜನರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸನ್ಮಾನಿಸಲಾಯಿತು.

ಲೋಕಸಭಾ ಸಭಾಧ್ಯಕ್ಷರಾದ ಓಂ ಬಿರ್ಲಾ, ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ್ ಸಿಂಗ್, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ಅವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...