ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದಿನಿಂದ ಧಾರಾಕಾರ ಮಳೆ

Date:

ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಛತ್ತೀಸ್‌ಗಢ ಮತ್ತು ಲಾಗೋವಾ ಪ್ರದೇಶದಲ್ಲಿ ಚಂಡಮಾರುತವಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಇದು ಕ್ರಮೇಣ ದಕ್ಷಿಣಕ್ಕೆ ಚಲಿಸುತ್ತಿದೆ. ಮಾನ್ಸೂನ್ ರೇಖೆಯು ಪ್ರಸ್ತುತ ಮಹಾರಾಷ್ಟ್ರದಿಂದ ಹಲವಾರು ರಾಜ್ಯಗಳಿಗೆ ವಿಸ್ತರಿಸಲಿದೆ ಎಂದು ಹೇಳಲಾಗಿದೆ.

ಇನ್ನು ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಕೆರೆ-ಕಟ್ಟೆ ಹಾಗೂ ಕರ್ನಾಟಕದ ಬಹುತೇಕ ಜಲಾಶಯಗಳು ತುಂಬಿ ಹರಿಯುತ್ತಿವೆ. ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪವನ್ – ಕಂಗನಾ ಎಂಬ ‘ಬುದ್ಧಿ’ವಂತರು ಮತ್ತು ಬಿಜೆಪಿ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಕೂಡ ಮಳೆಯಾಗಲಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿ.ಮೀ ಯಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.

ಬೆಳ್ತಂಗಡಿ, ಉಡುಪಿ, ಉಡುಪಿ, ಪಣಂಬೂರು, ಹೊನ್ನಾವರ, ಕದ್ರಾ, ಕುಮಟಾ, ಬನವಾಸಿ, ಬೆಳಗಾವಿ, ಕುಡತಿನಿ, ಸೇಡಂ, ಕಲಬುರಗಿ, ಕಾರವಾರ, ಸುಳ್ಯ, ಪುತ್ತೂರು, ಶಿರಾಲಿ, ಸಿದ್ದಾಪುರ, ಅಂಕೋಲಾ, ಕುಂದಾಪುರ, ಮಂಕಿ, ಧರ್ಮಸ್ಥಳ, ಜೇವರ್ಗಿ, ಭಾಗಮಂಡಲ, ಕೋಟ, ಕಾರ್ಕಳ, ಲಿಂಗನಮಕ್ಕಿ, ವಿಜಯನಗರ, ದಾವಣಗೆರೆ, ಹಿರಿಯೂರಿನಲ್ಲಿ ಮಳೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...