ಚಿತ್ರದುರ್ಗ: ಮಳೆಗೆ ಕೊಚ್ಚಿ ಹೋದ 3 ಚೆಕ್‌ ಡ್ಯಾಂಗಳು

Date:

ವಾರದಿಂದ ಸುರಿದ ಸತತ ಮಳೆಗೆ ಚಿತ್ರದುರ್ಗದ ನಾಯಕನಹಟ್ಟಿ ಪಟ್ಟಣ ಸುತ್ತಲಿನ ಪ್ರದೇಶದಲ್ಲಿರುವ 2.5 ಕೋಟಿ ರೂ. ವೆಚ್ಚದ ಮೂರು ಚೆಕ್‌ ಡ್ಯಾಂಗಳು ಕೊಚ್ಚಿ ಹೋಗಿವೆ.ನಾಯಕನಹಟ್ಟಿ ಪಟ್ಟಣ ಸಮೀಪದ ಪಿ.ಎಂ. ತಿಪ್ಪೇಸ್ವಾಮಿ ಅವರ ತೋಟದ ಬಳಿಯಿರುವ ಚೆಕ್‌ ಡ್ಯಾಂ, ಮಾಳಪ್ಪನಹಟ್ಟಿ ಮತ್ತು ಎನ್‌. ಮಹಾದೇವಪುರ ಗ್ರಾಮ ಸಮೀಪವಿರುವ 2 ಚೆಕ್‌ ಡ್ಯಾಂಗಳು ಸಂಪೂರ್ಣ ಹಾಳಾಗಿವೆ.

ಈ ಎಲ್ಲ ಚೆಕ್‌ ಡ್ಯಾಂಗಳನ್ನು ದೊಡ್ಡ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿತ್ತು. ನಾಯಕನಹಟ್ಟಿ ಬಳಿ ಇರುವ ಎರಡು ಚೆಕ್‌ಡ್ಯಾಂಗಳು ತಲಾ ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿವೆ. ಇದೇ ರೀತಿಯಲ್ಲಿ ಎನ್‌. ಮಹಾದೇವಪುರ ಚೆಕ್‌ ಡ್ಯಾಂ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಒಟ್ಟಾರೆ 2.5 ಕೋಟಿ ವೆಚ್ಚದ ಚೆಕ್‌ಡ್ಯಾಂಗಳು ನೀರು ಸಂಗ್ರಹಿಸುವುದರಲ್ಲಿ ವಿಫಲವಾಗಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಯಕನಹಟ್ಟಿಯಲ್ಲಿ ಈ ಬಾರಿ 25 ವರ್ಷದ ಇತಿಹಾಸದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇಲ್ಲಿನ ಸರಾಸರಿ ವಾಡಿಕೆ ಮಳೆ 415.9 ಮಿಮೀ ಆಗಿದೆ. ಆದರೆ ಇಲ್ಲಿಯವರೆಗೆ 984.4 ಮಿಮೀ ಮಳೆಯಾಗಿದೆ. ಇದು 25 ವರ್ಷದ ಅತ್ಯಧಿಕ ಮಳೆಯಾಗಿದೆ. ಅ. 5ರಂದು 129.6 ಮಿಮೀ ಮಳೆಯಾಗಿದ್ದು ಇದು ಒಂದೇ ದಿನ ಸುರಿದ ಸರ್ವಕಾಲಿನ ದಾಖಲೆ ಮಳೆಯಾಗಿದೆ. ಹೀಗಾಗಿ ನಿರೀಕ್ಷೆ ಹಾಗೂ ಸರಾಸರಿಗಿಂತ ಹೆಚ್ಚು ಮಳೆ ಸುರಿದಿರುವುದು ಚೆಕ್‌ಡ್ಯಾಂಗಳು ಕೊಚ್ಚಿರುವುದಕ್ಕೆ ಪ್ರಮುಖ ಕಾರಣವಾಗಿದೆ.

ಮೂರು ಚೆಕ್‌ ಡ್ಯಾಂಗಳು ರಿವೀಟ್‌ಮೆಂಟ್‌ ಹಾಳಾಗಿರುವುದು ಗಮನಕ್ಕೆ ಬಂದಿದೆ. ಗುತ್ತಿಗೆದಾರರಿಗೆ ಇದನ್ನು ಸರಿಪಡಿಸಲು ಸೂಚಿಸಲಾಗಿದೆ. ತೇವಾಂಶ ಹೆಚ್ಚಾಗಿರುವುದರಿಂದ ವಾಹನಗಳ ಓಡಾಟ ಸಾಧ್ಯವಿಲ್ಲ. ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದ ನಂತರ ದುರಸ್ತಿ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...