ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಕೆಲವೆಡೆ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಇಂದು(ಆಗಸ್ಟ್ 30) ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನು ಓದಿದ್ದೀರಾ? ಎರಡು ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ನಾಳೆಯಿಂದ ಒಂದು ವಾರಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸ್ಥಳಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಆಗಸ್ಟ್ 30, ಸೆಪ್ಟೆಂಬರ್ 1ರಂದು ಕರಾವಳಿಯಲ್ಲಿ ಗಂಟೆಗೆ 40ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.





