ಜೂನ್‌ 28ರವರೆಗೆ ರಾಜ್ಯದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಮುಂದಿನ ಜೂನ್ 28ರವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆ, ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಜೂನ್ 28ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನು ಓದಿದ್ದೀರಾ? ನವೆಂಬರ್ 5 ರವರೆಗೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಳನಾಡು ಜಿಲ್ಲೆಗಳಲ್ಲಿ ಜೂನ್ 28ರವರೆಗೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.

ಇನ್ನು ಇಂದು ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಜೂನ್ 28ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ(ಗಂಟೆಗೆ 30-40 ಕಿ.ಮೀ) ಭಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ(40-50 ಕಿ.ಮೀ) ಭಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಹಗುರ ಮಳೆಯಾಗಲಿದೆ.

ಇದನ್ನು ಓದಿದ್ದೀರಾ? ರಾಜ್ಯದ ಹಲವೆಡೆ ಭಾರಿ ಮಳೆ: ಮಂಗಳೂರಿನಲ್ಲಿ ವಿಮಾನಗಳ ಮಾರ್ಗ ಬದಲು

ಕರ್ನಾಟಕದ ದಕ್ಷಿನ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ನಿರಂತರ ಮಳೆಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಾವಣಗೆರೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗಾಳಿ ಸಮೇತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...