ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನು ಇಂದು ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

ಇದನ್ನು ಓದಿದ್ದೀರಾ? ಆಗಸ್ಟ್ 5ರಿಂದ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್ 26ರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳ ಕೆಲವೆಡೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಆಗಸ್ಟ್ 26 ಮತ್ತು 27ರಂದು ಕರಾವಳಿಯಲ್ಲಿ ಮತ್ತು ಹೊರಗೆ ಗಾಳಿಯ ವೇಗ ಗಂಟೆಗೆ 40-50 ಕಿ. ಮೀ, 60 ಕಿ. ಮೀ. ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಇಳಿಯದಂತೆ ಸೂಚಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...