ರಾಜ್ಯದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Date:

ರಾಜ್ಯದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಇಂದು ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನಲ್ಲಿಯೂ ಮಳೆ ಮುಂದುವರೆದಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಕೊಡಗು, ಹಾಸನ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ರಜೆ ನೀಡಲಾಗಿದೆ. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಪ್ರೌಢಶಾಲೆವರೆಗೆ, ಶಿವಮೊಗ್ಗ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಭಾರೀ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಎನ್‌ಆರ್ ಪುರ, ಕಳಸ ತಾಲ್ಲೂಕುಗಳಲ್ಲಿ ಮತ್ತು ಚಿಕ್ಕಮಗಳೂರು ತಾಲ್ಲೂಕಿನ ಜಾಗರ, ಆಲ್ದೂರು ಹೋಬಳಿ, ಆವತಿ, ಖಾಂಡ್ಯದಲ್ಲಿ ಮಳೆ ಹಿನ್ನೆಲೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಂಗನಾವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಿರಂತರವಾಗಿ ಮಳೆಯಾಗುತ್ತಿದ್ದು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗಿನಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಬೆನ್ನಲ್ಲೇ ಜಿಲ್ಲಾಧಿಕಾರಿ ವೆಂಕಟರಾಜಾ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಶಿವಮೊಗ್ಗದಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಹತ್ತು ತಾಲ್ಲೂಕುಗಳಿಗೆ ರಜೆ ಘೋಷಿಸಲಾಗಿದೆ. ಅಂಕೋಲಾ, ಹೊನ್ನಾವರ, ಶಿರಸಿ, ಯಲ್ಲಾಪುರ, ಜೋಯಿಡಾ, ಕಾರವಾರ, ಕುಮಟಾ, ಭಟ್ಕಳ, ಸಿದ್ಧಾಪುರದಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹಾಸನದಲ್ಲಿ ಸಕಲೇಶಪುರ, ಬೇಳೂರು ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಆಲೂರು ತಾಲ್ಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಲತಾ ಕುಮಾರಿ ಆದೇಶಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...