ರಾಜ್ಯದಲ್ಲಿ ಮಳೆ ಅಬ್ಬರ: ಕೊಡಗಿಗೆ ರೆಡ್‌ ಅಲರ್ಟ್‌; ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ

Date:

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಗುಕೊಂಡಿದೆ. ಗುರುವಾರದಿಂದ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನೂ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಕಿ ಹಾಗೂ ಉತ್ತರ ಕನ್ನಡ, ಉತ್ತರ ಒಳನಾಡು ಜಿಲ್ಲೆಗಳಾದ ಧಾರವಾಡ, ಬೆಳಗಾವಿ, ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್​​​ನಲ್ಲಿ ಕಳೆದ 24 ಗಂಟೆಯಲ್ಲಿ 270 ಮಿ.ಮೀ. ದಾಖಲೆಯ ಮಳೆಯಾಗಿದೆ. ಜಿಲ್ಲೆಯಲ್ಲಿರುವ ಲಿಂಗನಮಕ್ಕಿ ಜಲಾಶಯಕ್ಕೆ 45,070 ಕ್ಯೂಸೆಕ್​​​ ನೀರಿನ ಒಳ ಹರಿವಿದೆ. ಜಲಾಶಯದ ಗರಿಷ್ಠ ಮಟ್ಟ 1,819 ಅಡಿಗಳಿದ್ದು, ಈಗಾಗಲೇ 1787.80 ಅಡಿಗಳಷ್ಟು ನೀರು ತುಂಬಿದೆ. ಕೆಲವೇ ದಿನಗಳಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ತುಂಗಭದ್ರ ನದಿ ಕೂಡ ತುಂಬಿ ಹರಿಯುತ್ತಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ ಹಾಗೂ ಹರಿಹರ ತಾಲೂಕಿನ ವ್ಯಾಪ್ತಿಯಲ್ಲಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹರಿಹರದ ಹರಿಹರೇಶ್ವರ ದೇವಸ್ಥಾನ ಬಳಿಯ ಗೋಪುರ ಜಲಾವೃತವಾಗಿದೆ.

ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಎರಡೂ ಜಿಲ್ಲೆಯ ಎಲ್ಲ ಶಾಲೆಗಳು, ಅಂಗನವಾಡಿಗಳು ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದ್ದು, ಶಿರಸಿ, ಜೋಯಿಡಾ, ಸಿದ್ದಾಪುರ ತಾಲೂಕಿನ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂತೆಯೇ, ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ, ಸಾಗರ ಮತ್ತು ಹೊಸನಗರ ತಾಲೂಕುಗಳ ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...