ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 30ರವರೆಗೂ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದ್ದು, ಜೋರು ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾಸನ, ಕೊಡಗು, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿತ್ರದುರ್ಗ, ವಿಜಯನಗರ, ಗದಗ, ಹಾವೇರಿ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಮೂಡುಬಿದಿರೆ, ಶೃಂಗೇರಿ, ಕಳಸ, ಭಾಗಮಂಡಲ, ತ್ಯಾಗರ್ತಿ, ಬಾಳೆಹೊನ್ನೂರು, ಆಗುಂಬೆ, ಹೊನ್ನಾವರ, ಕಾರವಾರ, ಮಂಕಿ, ಶಿರಾಲಿ, ಸಿದ್ದಾಪುರ, ಕೋಟಾ, ಕ್ಯಾಸಲ್​ರಾಕ್, ಕುಮಟಾ, ಗೋಕರ್ಣ, ಕದ್ರಾ, ಮಂಗಳೂರು, ಶಕ್ತಿನಗರ, ಕುಂದಾಪುರ, ಮಂಗಳೂರು, ಕಾರ್ಕಳ, ಅಂಕೋಲಾದಲ್ಲಿ ಗುರುವಾರ ಭಾರಿ ಮಳೆಯಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹದಾಯಿ: ನಾಯಕರೇ ನಾಡದ್ರೋಹಿಗಳು

ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಬೀದರ್, ಕಮ್ಮರಡಿ, ಕೊಟ್ಟಿಗೆಹಾರ, ಕೊಪ್ಪ, ಜಯಪುರ, ಬಂಟವಾಳ, ಜೋಯ್ಡಾ, ಸುಳ್ಯ, ಭಾಲ್ಕಿ, ಸೋಮವಾರಪೇಟೆ, ಗುರುಮಿಟ್ಕಲ್, ಯಲ್ಲಾಪುರ, ಬನವಾಸಿ, ಮುದ್ದೇಬಿಹಾಳ, ದಾವಣಗೆರೆ, ತರೀಕೆರೆ, ಜಗಳೂರು, ಭರಮಸಾಗರ, ಅಜ್ಜಂಪುರ, ಚನ್ನಗಿರಿ, ಹಾರಂಗಿ, ಕುಶಾಲನಗರ, ಹಾರಂಗಿ, ದಾವಣಗೆರೆ, ಕಕ್ಕೇರಿ, ಖಾನಾಪುರ, ತಾಳಿಕೋಟೆ, ಶಿಗ್ಗಾಂವ್, ಕಲಘಟಗಿ, ಹುಣಸಗಿ, ಹಿರೆಕೆರೂರು, ಜೇವರ್ಗಿ, ಗಬ್ಬೂರು, ಮಾನ್ವಿ, ಮುಂಡಗೋಡಿನಲ್ಲಿ ಸಾಧಾರಣ ಮಳೆಯಾಗಿದೆ.

ಬೆಂಗಳೂರು ನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಗಂಟೆಗೆ 40 ರಿಂದ 50 ಕಿ.ಮೀ‌ ವೇಗದಲ್ಲಿ ಗಾಳಿ ಬೀಸಲಿದೆ. ನಗರದಲ್ಲಿ ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...