ಕರ್ನಾಟಕದಲ್ಲಿ ಮಳೆ ಅಬ್ಬರ ಆರಂಭ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

Date:

ಚಳಗಾಲ ಕಳೆದ ಬೇಸಿಗೆ ಕಾಲಕ್ಕೆ ಕಾಲಿಟ್ಟು ಕೆಲವೇ ದಿನಗಳಷ್ಟೇ ಕಳೆದಿವೆ. ಬೇಸಿಗೆಯಲ್ಲೂ ಮಳೆ ಅಬ್ಬರ ಮುಂದುವರೆದಿದೆ. ಉತ್ತರ ಭಾರತದ ಹಲವು ಭಾಗಗಳಲ್ಲಿ ಸುರಿಯುತ್ತದ್ದ ಮಳೆ, ಇದೀಗ ದಕ್ಷಿಣ ರಾಜ್ಯಗಳಿಗೂ ವಿಸ್ತರಿಸಿದೆ. ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆಯು 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಹೇಳಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಹಾಸನ, ಚಾಮರಾಜನಗರ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ದಕ್ಷಿಣ ಕನ್ನಡ ಹೊರತುಪಡಿಸಿ, ಉಳಿದ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಮೋಡ ಕವಿದ ವಾತಾವರಣವಿದೆ.

ಇನ್ನು, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...