ಕರ್ನಾಟಕದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿದೆ. ಇನ್ನೂ ಐದು ದಿನಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ 20 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದ್ದು, ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಕರಾವಳಿ ಪ್ರದೇಶದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ಉತ್ತರ ಒಳನಾಡು ಜಿಲ್ಲೆಗಳಾದ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಇಳಿಸಿದೆ.
ಅಲ್ಲದೆ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.




