ಕರಾವಳಿ- ಮಲೆನಾಡು ಜಿಲ್ಲೆಗಳಲ್ಲಿ ತೀವ್ರ ಮಳೆ, ಬೆಳಗಾವಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Date:

ರಾಜ್ಯದಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಅದರಲ್ಲೂ ಮಳೆಯಾಗದ ಜಿಲ್ಲೆಗಳಲ್ಲೂ ಈ ಬಾರಿ ಮಳೆಯಾರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಬುಧವಾರ (ಆಗಸ್ಟ್‌ 20)ದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.

ಈ ಹಿಂದೆ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ತಾಲೂಕುಗಳಿಗೆ ಸೋಮವಾರ ಮತ್ತು ಮಂಗಳವಾರವೂ ರಜೆ ಘೋಷಿಸಲಾಗಿತ್ತು. ಇದೀಗ ಬುಧವಾರವೂ ರಜೆ ಘೋಷಿಸಲಾಗಿದ್ದು, ಸತತ ಮೂರು ದಿನ ರಜೆ ನೀಡಿದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಆಗಸ್ಟ್ 20, 2025ರ ಬುಧವಾರದಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿವೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ತೀವ್ರ ಮಳೆಯೊಂದಿಗೆ ಜೋರಾದ ಗಾಳಿಯ ಎಚ್ಚರಿಕೆಯನ್ನು ಘೋಷಿಸಲಾಗಿದೆ. 

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಈಗಾಗಲೇ ಕೆಲ ಜಿಲ್ಲೆಗಳಿಗೆ ರೆಡ್‌ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಪರಿಣಾಮ ಭೂಕುಸಿತ, ಪ್ರವಾಹ ಸಂಭವಿಸುವ ಸಾಧ್ಯತೆಯೂ ಇದೆ. ಆದ್ದರಿಂದ ಕೆಲ ಜಿಲ್ಲೆಯ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 20ರಂದೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...