ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ; 14 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ

Date:

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಆರಂಭವಾಗಿದೆ. ಮಂಗಳವಾರ, ರಾಜ್ಯದ ಹಲವೆಡೆ ಮಳೆಯಾಗಿದೆ. ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬುಧವಾರ, ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಬುಧವಾರ ಬೆಳಗ್ಗೆಯಿಂದಲೇ ಬೆಂಗಳೂರು ಸೇರಿದಂತೆ ಹಲವೆಡೆ ಸೋನೆ ಮಳೆಯಾಗಿದೆ. ಮೋಡ ಕವಿದ ವಾತವಾರಣವಿದೆ. ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಕೊಡಗು, ಹಾಸನ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಳಿದಂತೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...