Rain | ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏ.7ರಿಂದ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಚಂಡಮಾರುತ (cyclone) ಪರಿಚಲನೆ ಉಂಟಾಗಿದೆ. ಪರಿಣಾಮ, ಕರವಾಳಿ ರಾಜ್ಯಗಳಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ. ಅಂತೆಯೇ, ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿಯೂ ಮಳೆ (rain) ಸುರಿಯಲಿದೆ ಎಂದು ಹೇಳಿದೆ.

ಕಳೆದ ಒಂದು ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಶನಿವಾರ ಕೂಡ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಮಳೆ ಮುಂದುವರೆದಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಈ ಮೂರು ಜಿಲ್ಲೆಗಳಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...