ಕಳೆದ ಮೂರು ತಿಂಗಳುಗಳಿಂದ ಮಳೆ ಅಬ್ಬರಕ್ಕೆ ಉತ್ತರ ಕರ್ನಾಟಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಇದೀಗ, ಮಳೆ ಅಬ್ಬರ ಕಡಿಮೆಯಾಗಿದೆ. ಆದಾಗ್ಯೂ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನೂ ಎರಡು ದಿನಗಳ ಕಾಲ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ, ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮೈಸೂರು ಮತ್ತು ಕರಾವಳಿ ಭಾಗದಲ್ಲಿ ಭಾನುವಾರ ಮತ್ತು ಸೋಮವಾರ ಹೆಚ್ಚು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಉಳಿದಂತೆ, ಉತ್ತರ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.




