ರಾಜ್ಯದಲ್ಲಿ ಮಳೆ ಅಬ್ಬರ; ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​

Date:

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆಯು ಆರೆಂಜ್ ಅಲರ್ಟ್​ ಘೋಷಿಸಿದೆ. ಅಲ್ಲದೆ, ಬೆಳಗಾವಿ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೊಡ ಕವಿದ ವಾತಾವರಣವಿದೆ. ಬೆಂಗಳೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಗದಗ, ಧಾರವಾಡ, ಕೊಪ್ಪಳ್ಳ, ಬಳ್ಳಾರಿ, ಬೀದರ್, ಕಲಬುಗರಿ, ಯಾರಚೂರು, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕಳೆದೊಂದು ತಿಂಗಳಿನಿಂದ ರಾಜ್ಯದ ನಾನಾ ಭಾಗಗಳಲ್ಲಿ ಧಾರಕಾರ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವಾರು ಪ್ರಮುಖ ಸೇತುವೆಗಳು ಮುಳಗಡೆಯಾಗಿವೆ. ಜಲಾಶಯಗಳು ಭರ್ತಿಯಾಗಿದ್ದು, ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗಳಿಗೆ ಹರಿಸಲಾಗುತ್ತಿದೆ. ಪರಿಣಾಮ, ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಮಲೆನಾಡು ಪ್ರದೇಶದಲ್ಲಿ ಮಳೆಯಿಂದಾಗಿ, ಗುಡ್ಡ ಕುಸಿತಗಳು ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...