ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಪಕ್ಷ ನೀಡಿದ್ದ ಜಾಹೀರಾತನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಲ್ಲಿ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನಹಾನಿ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಬಿಜೆಪಿ ಹೂಡಿದ್ದ ಮಾನಹಾನಿ ಪ್ರಕರಣ ರದ್ದು ಕೋರಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿತು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್ ಬಲ, ಮಾಧ್ಯಮಗಳ ಬೆಂಬಲದಿಂದ ಬಿಜೆಪಿ ಬದುಕಿದೆಯೇ?
ಅರ್ಜಿ ಮಾನ್ಯ ಮಾಡಿರುವ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದಲ್ಲಿನ ಪ್ರಕ್ರಿಯೆ ಮುಂದುವರಿಕೆಯು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗಲಿದೆ. ಆದ್ದರಿಂದ, ಪ್ರಕರಣದ 4ನೇ ಆರೋಪಿ ರಾಹುಲ್ ಗಾಂಧಿ ವಿರುದ್ಧದ ಪ್ರಕ್ರಿಯೆ ರದ್ದುಪಡಿಸಲಾಗಿದೆ ಎಂದು ನ್ಯಾಯಾಲಯ ಆದೇಶಿಸಿತು. ವಿಸ್ತೃತ ತೀರ್ಪು ಇನ್ನಷ್ಟೇ ಬಿಡುಗಡೆಯಾಬೇಕಿದೆ.





