ಚುನಾವಣಾ ಬಾಂಡ್ ಸುಲಿಗೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Date:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳಿನ್ ಕುಮಾ‌ರ್ ಕಟೀಲು ಸೇರಿದಂತೆ ಮತ್ತಿತರರ ವಿರುದ್ಧದ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಕಾಯ್ದಿರಿಸಿದೆ.

ದೂರುದಾರ ಆದರ್ಶ್ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದು, ನಳಿನ್ ಕುಮಾರ್ ಕಟೀಲು ಪರ ಹಿರಿಯ ವಕೀಲ ಕೆ.ಜಿ.ರಾಘವನ್ ಪ್ರತಿವಾದ ಮಾಡಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪು ಕಾಯ್ದಿರಿಸಿದೆ. ಇನ್ನು ಪ್ರಕರಣದ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ವಿಸ್ತರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚುನಾವಣಾ ಬಾಂಡ್‌ ಪ್ರಕರಣ : ನಿರ್ಮಲಾ ಸೀತಾರಾಮನ್‌ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬಿಜೆಪಿಯ ರಾಜ್ಯ, ರಾಷ್ಟ್ರ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ತಿಲಕ್‌ ನಗರ ಠಾಣೆಯಲ್ಲಿ ನಿರ್ಮಲಾ ಸೀತಾರಾಮನ್‌, ಜೆ ಪಿ ನಡ್ಡಾ, ನಳಿನ್ ಕುಮಾ‌ರ್ ಕಟೀಲು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾದ ನಳಿನ್ ಕುಮಾ‌ರ್ ಕಟೀಲು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಬುಧವಾರ ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶ ಕಾಯ್ದಿರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...