ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧಿ ಕೇಂದ್ರ ಸ್ಥಗಿತಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆ

Date:

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧಿ ಕೇಂದ್ರ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ಹೊರಡಿಸಿದೆ.

ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರಗಳನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿತ್ತು. ಇದಕ್ಕೆ ವೀರೋಧ ವ್ಯಕ್ತವಾಗಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಇಂದು (ಜುಲೈ 08) ಈ ಅರ್ಜಿಗಳನ್ನು ವಿಚಾರಣೆ ಹೈಕೋರ್ಟ್‌ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಹಿನ್ನೆಲೆ

ರಾಜ್ಯ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರು ಹೊರಗಡೆಯಿಂದ ​ ಔಷಧಿಗಳನ್ನು ತರುವಂತೆ ರೋಗಿಗಳಿಗೆ ಸಲಹಾ ಚೀಟಿಗಳನ್ನು ನೀಡುವುದನ್ನು ಸರ್ಕಾರ ನಿಷೇಧಿಸಿದೆ. ಈ ಮೂಲಕ ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ತರಹದ ಔಷಧಿಗಳನ್ನು ಹೊರಗೆ ಖರೀದಿಸುವಂತೆ ಶಿಫಾರಸ್ಸು ಮಾಡದಂತೆ ನೋಡಿಕೊಳ್ಳುವುದು ಸರ್ಕಾರದ ನೀತಿಯಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನಲ್ಲಿನ ಜನ ಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವಿರುದ್ಧವಾಗಿದೆ. ಈ ಕಾರಣದಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನ ಔಷಧಿ ಕೇಂದ್ರಗಳನ್ನು ಬಂದ್​ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಅಂದರೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಮಾತ್ರ ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಲಾಗಿದೆ. ಆದೇಶ ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿಗಳ ಕೈಸೇರಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಪಿಎಂ ಜನ ಔಷಧ ಕೇಂದ್ರಗಳು ಬಾಗಿಲು ಮುಚ್ಚಿವೆ.

ಇದಕ್ಕೆ ಬಿಜೆಪಿ ಸೇರಿದಂತೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಡವರಿಗೆ ಕಡಿಮೆ ದರದಲ್ಲಿ ನೀಡುವ ಜನೌಷಧಿ ಕೇಂದ್ರಗಳನ್ನು ಮುಚ್ಚುವುದು ಸರಿಯಲ್ಲ. ರಾಜ್ಯ ಸರ್ಕಾರ ಆದೇಶವನ್ನು ವಾಪಸ್ ಪಡೆಯಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...