ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಲಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

Date:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿದ್ಯಾರ್ಥಿನಿ ಸೌಜನ್ಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಏಪ್ರಿಲ್ 6ರಂದು ಧರ್ಮಸ್ಥಳದಲ್ಲಿ ನಡೆಯಲಿದ್ದ ಹಕ್ಕೊತ್ತಾಯ ಸಭೆ ಮತ್ತು ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್​ ತಾತ್ಕಾಲಿಕ ತಡೆ ನೀಡಿದೆ.

ಧನಕೀರ್ತಿ ಆರಿಗ ಎಂಬವರು ಈ ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಮುಂದಿನ ವಿಚಾರಣೆಯವರೆಗೂ ಪ್ರತಿಭಟನೆ ನಡೆಸದಂತೆ ತಾತ್ಕಾಲಿಕ ತಡೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ತುಳುನಾಡ ಸಂಸ್ಕೃತಿಯಂತೆ ‘ದೈವ’ ಆಗಬೇಕಾಗಿದ್ದ ಸೌಜನ್ಯ ದೇವಿಯಾದಳು; ವೈದಿಕೀಕರಣದ ಹೊಸ ಮಗ್ಗಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪ್ರತಿಭಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶಗಳನ್ನು ಉಲ್ಲೇಖಿಸಿದ್ದಾರೆ. ಧರ್ಮಸ್ಥಳ ದೇವಾಲಯ ಹಾಗೂ ಧರ್ಮಾಧಿಕಾರಿಗಳ ಪರವಾಗಿ ನ್ಯಾಯಾಲಯ ಹೊರಡಿಸಿದ್ದ ಆದೇಶಗಳನ್ನು ಉಲ್ಲಂಘಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ದೇವಸ್ಥಾನಕ್ಕೆ ನುಗ್ಗುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

ವಾದ ಆಲಿಸಿದ ಪೀಠವು ಪ್ರತಿಭಟನೆಗೆ ಮಧ್ಯಂತರ ತಡೆ ನೀಡಿದೆ. ಹಾಗೆಯೇ ಪ್ರತಿಭಟನೆ ಆಯೋಜಕರಿಗೆ ತುರ್ತು ನೋಟಿಸ್​ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.

ಇದನ್ನು ಓದಿದ್ದೀರಾ? ಸುಳ್ಯ | ಸೌಜನ್ಯಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಬೃಹತ್ ಪ್ರತಿಭಟನೆ

ಸೌಜನ್ಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ಸಂತೋಷ್ ನಿರಪರಾಧಿ ಎಂದು ಈಗಾಗಲೇ ಕೋರ್ಟ್ ಘೋಷಿಸಿದೆ. ಈ ಕೊಲೆಯ ನಿಜ ಆರೋಪಿ ಯಾರು ಎಂದು ಆಗ್ರಹಿಸಿ ನಿರಂತರ ಪ್ರತಿಭಟನೆ, ಸಭೆ ನಡೆಸಲಾಗುತ್ತಿದೆ.

ಈ ಹಿಂದೆ ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅರ್ಜಿ ವಿಚಾರಣೆ ನಡೆಸಿದ್ದ ಪೀಠವು ಶಾಂತಿಯುತ ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನಿರಾಕರಿಸಲಾಗುವುದಿಲ್ಲ ಎಂದಿತ್ತು. ಆದರೆ ಇದೀಗ ಅರ್ಜಿದಾರರ ಪರ ವಕೀಲರು ಧರ್ಮಸ್ಥಳ ದೇವಸ್ಥಾನಕ್ಕೆ ಒತ್ತಾಯಪೂರ್ವಕವಾಗಿ ನುಗ್ಗುವ ಸಾಧ್ಯತೆಯಿದೆ ಎಂದು ವಾದಿಸಿರುವ ಕಾರಣ ತಾತ್ಕಾಲಿಕ ತಡೆ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...