ಕೆಎಂಎಫ್ ಇತಿಹಾಸದಲ್ಲೇ ನಂದಿನಿ ಹಾಲು ಮೊದಲ ಬಾರಿಗೆ ಅತಿಹೆಚ್ಚು ಸಂಗ್ರಹ, ಮಾರಾಟ

Date:

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್​​) ಹಾಲು ಸಂಗ್ರಹ ಹಾಗೂ ಮಾರಾಟದಲ್ಲಿ ಮತ್ತೆ ದಾಖಲೆ ಬರೆದಿದೆ. ಇತ್ತೀಚಿಗಷ್ಟೇ ದಿನವೊಂದರಲ್ಲಿ 1 ಕೋಟಿ ಲೀಟರ್‌ಗೂ ಅಧಿಕ ಪ್ರಮಾಣದ ಹಾಲು ಸಂಗ್ರಹಿಸಿದ್ದ ಕೆಎಂಎಫ್​, ಜುಲೈ ತಿಂಗಳಿನಲ್ಲಿ ಪ್ರತಿನಿತ್ಯವೂ ಒಂದು ಕೋಟಿ ಲೀಟರ್‌ ಹಾಲು ಸಂಗ್ರಹಿಸಿ ಮತ್ತೊಂದು ದಾಖಲೆ ನಿರ್ಮಿಸಿದೆ.

ಪ್ರಸ್ತುತ ಸಂಸ್ಥೆಯ ಹದಿನಾರು ಒಕ್ಕೂಟಗಳಲ್ಲಿ ನಿತ್ಯವೂ ಸರಾಸರಿ 98.26 ಲಕ್ಷ ಕೆಜಿ ಹಾಲು ಸಂಗ್ರಹವಾಗುತ್ತಿದೆ. ಈ ತಿಂಗಳಲ್ಲಿ ಪ್ರತಿದಿನವೂ 1 ಕೋಟಿ ಕೆಜಿ ಹಾಲು ಸಂಗ್ರಹವಾಗುತ್ತಿದೆ. ಹಿಂದಿನ ವರ್ಷ ಇದೇ ಅವಧಿಯಲ್ಲಿ 96.74 ಲಕ್ಷ ಕೆಜಿ ಹಾಲು ಸಂಗ್ರಹವಾಗಿತ್ತು. ಸಂಗ್ರಹಗೊಳ್ಳುವ ಹಾಲಿನಲ್ಲಿ ಅರ್ಧದಷ್ಟು ಮಾರಾಟವಾಗುತ್ತಿದ್ದು, ಕಳೆದ ವಾರದಲ್ಲಿ ನಿತ್ಯವೂ ಸರಾಸರಿ 46 ಲೀ. ಮಾರಾಟ ಕಂಡಿದೆ. ಉಳಿದ ಹಾಲು ಸಂಸ್ಥೆಯ ಇತರ ಉತ್ಪನ್ನಗಳಿಗೆ ಬಳಸಿಕೊಳ್ಳಲಾಗುತ್ತಿದೆ.

ಮೊದಲ ಸ್ಥಾನದಲ್ಲಿ ಬಮೂಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಂಎಫ್​ 16 ಒಕ್ಕೂಟಗಳನ್ನು ಹೊಂದಿದ್ದು, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳನ್ನು ಒಳಗೊಂಡಿರುವ ‘ಬಮುಲ್’ ಒಕ್ಕೂಟವು ಹೆಚ್ಚು ಹಾಲು ಸಂಗ್ರಹ ಹಾಗೂ ಮಾರಾಟದಲ್ಲಿ ಮೊದಲ ಸ್ಥಾನದಲ್ಲಿದೆ. ಬಮೂಲ್ ನಿತ್ಯವೂ ಸರಾಸರಿ 17.18 ಲಕ್ಷ ಕೆಜಿ ಹಾಲು ಸಂಗ್ರಹಿಸುತ್ತಿದ್ದು, 9.40 ಲಕ್ಷ ಲೀ. ಪ್ರಮಾಣದಷ್ಟು ಮಾರಾಟ ಮಾಡುತ್ತಿದೆ. ರಾಜಧಾನಿಯಲ್ಲಿ ಹಾಲು ಹಾಗೂ ಮೊಸರು ಮಾರಾಟ 22 ಲಕ್ಷ ಲೀಟರ್‌ಗೂ ಅಧಿಕ ಮಾರಾಟವಾಗುತ್ತಿದೆ.

ಬೆಂಗಳೂರು ಹೊರತುಪಡಿಸಿ ಹಾಸನ, ಮಂಡ್ಯ, ತುಮಕೂರು, ಮೈಸೂರು ಹಾಗೂ ಶಿವಮೊಗ್ಗ ಒಕ್ಕೂಟಗಳಲ್ಲಿ ಹೆಚ್ಚಿನ ಹಾಲು ಸಂಗ್ರಹವಾಗುತ್ತಿದೆ. ಹಸುಗಳ ಸಂಖ್ಯೆ ಕಡಿಮೆ ಇರುವುದರಿಂದ ಕಲಬುರಗಿ ಒಕ್ಕೂಟದಲ್ಲಿ 0.60 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ಈ ಪೈಕಿ ಶೇ.95 ಮಾರಾಟವಾಗುತ್ತಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವನಹಳ್ಳಿ ಐತಿಹಾಸಿಕ ಗೆಲುವಿಗೆ ರೈತರು, ಪ್ರಗತಿಪರ ಸಂಘಟನೆಗಳು ಹಾಗೂ ಸಿದ್ದರಾಮಯ್ಯ ಕಾರಣ

ರಾಜ್ಯದ ವಿವಿಧ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಂದಿನಿ ಹಾಲು ಹಾಗೂ ಇತರ ಉತ್ಪನ್ನಗಳ ಮಾರಾಟ ಹೆಚ್ಚುತ್ತಿದೆ. ಕೆಲ ತಿಂಗಳ ಹಿಂದೆ ಪರಿಚಯಿಸಿರುವ ದೋಸೆ ಹಿಟ್ಟು ಹೆಚ್ಚು ಜನಪ್ರಿಯವಾಗಿದೆ.

ತಿರುಪತಿ ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪ

ನಂದಿನಿ ಹಾಲು/ಮೊಸರು ನಂತರ ಕೆಎಂಎಫ್​ ತುಪ್ಪ ಹೆಚ್ಚಿನ ಬೇಡಿಕೆಯನ್ನು ಹೊಂದಿದೆ. ಇತರ ಸಂಸ್ಥೆಗಳಿಗಿಂತ ನಂದಿನಿ ಬ್ರ್ಯಾಂಡಿನ ತುಪ್ಪ ಅಧಿಕ ಸ್ವಾದ ಹಾಗೂ ಗುಣಮಟ್ಟವನ್ನು ಹೊಂದಿದೆ. ಇದೇ ಕಾರಣದಿಂದ ತಿರುಪತಿ ಶ್ರೀನಿವಾಸ ದೇವಸ್ಥಾನದ (ಟಿಟಿಡಿ) ಲಾಡು ಪ್ರಸಾದಕ್ಕೆ ನಂದಿನಿ ತುಪ್ಪವನ್ನೇ ಬಳಸಲಾಗುತ್ತಿದೆ. ಇದರಿಂದಾಗಿ ಲಡ್ಡುವಿನ ಘಮ ಮತ್ತಷ್ಟು ಹೆಚ್ಚಿದೆ. ರಾಜ್ಯ ಹಾಗೂ ನೆರೆ ರಾಜ್ಯಗಳಲ್ಲಿನ ಸೂಪರ್ ಮಾರ್ಕೆಟ್‌ಗಳಲ್ಲಿ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...