ಹಿಜಾಬ್ ನಿಷೇಧ ವಾಪಸ್‌ ಹಿಂದೆ ಸಿದ್ದರಾಮಯ್ಯ ಕುತಂತ್ರ ಅಡಗಿದೆ: ಆರ್‌ ಅಶೋಕ್

Date:

ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಗ್ಯಾರಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯನವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಹಿಜಾಬ್ ನಿಷೇಧ ವಾಪಸ್ ಪಡೆಯುವ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ವಿರೋಧ ವ್ಯಕ್ತಪಡಿಸಿ, “ಹಿಜಾಬ್ ನಿಷೇಧ ವಾಪಸ್ ಪಡೆಯುವ ನಿರ್ಧಾರ ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಜಾತ್ಯತೀತ ಸ್ವರೂಪವನ್ನು ಪ್ರಶ್ನಿಸುವಂತಿದೆ” ಎಂದು ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

ಸಿದ್ದರಾಮಯ್ಯ ಹೇಳಿದ್ದೇನು?

‘ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.
ಮೈಸೂರಿನ ಕಲವಂದೆಯಲ್ಲಿ ಮಾತನಾಡಿದ್ದ ಅವರು, ”ಉಡುಪು, ಆಹಾರ ಪದ್ಧತಿ… ಅವು ನಿಮ್ಮ ಆಯ್ಕೆ. ನಾನೇಕೆ ಇವುಗಳಿಗೆ ಅಡ್ಡಿಯಾಗಲಿ? ನೀವು ಬಯಸಿದ ಉಡುಪನ್ನು ಧರಿಸಿ, ನಿಮಗೆ ಬೇಕಾದದ್ದನ್ನು ತಿನ್ನಿ. ನನಗೆ ಬೇಕೆನಿಸಿದ್ದನ್ನು ನಾನು ತಿನ್ನುವೆ. ಉಡುಪು, ಆಹಾರ ಅವರವರ ಇಷ್ಟ ಮತ್ತು ಹಕ್ಕು. ಇದು ತುಂಬಾ ಸರಳ, ಓಟಿಗಾಗಿ ರಾಜಕಾರಣ ಮಾಡಬಾರದು. ನಾವು ಅಂತಹ ರಾಜಕಾರಣ ಮಾಡುವುದಿಲ್ಲ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...