ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು: ಕೆ ಎಸ್ ಭಗವಾನ್

Date:

ಶೂದ್ರರು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು ಎಂದು ಸಾಹಿತಿ, ಚಿಂತಕ ಪ್ರೊ. ಕೆ.ಎಸ್.ಭಗವಾನ್ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಹಿಷ ದಸರಾದಲ್ಲಿ ಮಾತನಾಡಿದ ಅವರು, ಜ್ಞಾನದ ಹಸಿವು ಇಲ್ಲದ ಕಾರಣ ಹಲವರು ಗುಲಾಮರಾಗಿದ್ದಾರೆ. ಹಿಂದೂ ಧರ್ಮ ಅಂದ್ರೆ ಅದು ಹಿಂದೂಗಳ ಧರ್ಮ ಅಲ್ಲ. ಹಿಂದೂ ಧರ್ಮ ಅಂದರೆ ಅದು ಬ್ರಾಹ್ಮಣರ ಧರ್ಮ. ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಹಿಂದೂಗಳು ಮುಂದಕ್ಕೆ ಬಾರದ ಜನ ಹಾಗೂ ಬೇರೆಯವರನ್ನು ಮುಂದಕ್ಕೆ ಬಿಡುವುದಿಲ್ಲ. ಗಂಡಸರನ್ನು ಮಾತ್ರ ಬ್ರಾಹ್ಮಣರು ಅಂತಾರೆ. ಹೆಂಗಸರನ್ನಾ ಬ್ರಾಹ್ಮಣರು ಎನ್ನು, ಅವರನ್ನು ಶೂದ್ರರು ಅಂತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇವಸ್ಥಾನ ಕಟ್ಟೋದು ಶೂದ್ರರು. ದೇವಸ್ಥಾನದ ಒಳಗೆ ಇರೋರು ಬ್ರಾಹ್ಮಣರು. ದೇವಸ್ಥಾನ ಕಟ್ಟಿದ ಶೂದ್ರರನ್ನೇ ಬಿಟ್ಟುಕೊಳ್ಳಲ್ಲ. ನಾವು ಶೂದ್ರರಲ್ಲಾ ಎಂದು ಹೇಳಬೇಕು. ಶೂದ್ರರು ದೇವಸ್ಥಾನಗಳಿಗೆ ಹೋಗೋದನ್ನು ನಿಲ್ಲಸಬೇಕು. ನಾನು 50 ವರ್ಷ ಆಯ್ತು ದೇವಸ್ಥಾನಕ್ಕೆ ಹೋಗಿ. ದೇವಸ್ಥಾಕ್ಕೆ ಹೋದ್ರೆ ಏನು ಆಗಲ್ಲ. ತಟ್ಟೆಗೆ ದುಡ್ಡು ಹಾಕ್ತೀರಾ, ಅರ್ಧ ಕಾಯಿ ಇಟ್ಟುಕೊಂಡು ಅರ್ಧ ಕೊಡ್ತಾರೆ ಅಷ್ಟೇ. ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು. ನಾವು ಶೂದ್ರರು ಎಂದು ಒಪ್ಪಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆಸ್ಕರ್ 2025 | ಭಾರತವನ್ನು ಪ್ರತಿನಿಧಿಸಲಿದೆ ‘ಲಾಪತಾ ಲೇಡೀಸ್’

ಹಿಂದೂ ಧರ್ಮ ನಮ್ಮದಲ್ಲ. ನಮಗೆ ಹಿಂದೂ ಧರ್ಮ ಬೇಕಿಲ್ಲ. ಎಲ್ಲರೂ ಬುದ್ಧ ಗುರುಗಳನ್ನು ನಂಬಿ. ನಾನು ಹೇಳಿದ್ದು ನಂಬಿ ಅಂತಾ ಬುದ್ಧ ಹೇಳಲ್ಲ. ನಾನು ಹೇಳಿದ್ದು ಕೇಳಬೇಕು ಅಂತಾ ಏಸು ಹೇಳ್ತಾರೆ. ನಾನು ಹೇಳದ್ದು ಕೇಳದಿದ್ರೆ ನರಕ್ಕೆ ಹೋಗ್ತೀರಾ ಅಂತಾ ಕೃಷ್ಣ ಹೇಳ್ತಾನೆ. ನಾವು ಬುದ್ಧ ಧರ್ಮಕ್ಕೆ ಹೋಗಬೇಕು. ಶೂದ್ರರು ಎಂಬ ಗುಲಾಮರನ್ನು ಎಚ್ಚರಿಸಬೇಕು. ಯಾರು ಹೀನನಾಗಿದ್ದಾನೆ ಅವನು ಹಿಂದೂ. ಹಿಂದೂ ಎಂದರೆ ಹೀನಾ ಎಂದು ಅರ್ಥ. ಯಾರು ಹಿಂದೂ ಆಗಬಾರದು ಎಂದು ತಿಳಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...