ಎಚ್‌ಎಂಪಿ ವೈರಸ್‌ ರಾಜ್ಯದಲ್ಲಿ ಪತ್ತೆ, ಸೋಂಕು ಹರಡದಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

Date:

ರಾಜ್ಯದಲ್ಲಿ ಎಚ್‌ಎಂಪಿ ವೈರಸ್‌ನ ಎರಡು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಜ.6) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಚೈನಾ ದೇಶದಲ್ಲಿ ಎಚ್‌ಎಂಪಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ” ಎಂದರು.

“ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನಃ ಪ್ರಾರಂಭಿಸುವ ಬಗ್ಗೆ ಆರೋಗ್ಯ ಸಚಿವರು ಸಭೆಯ ಬಳಿಕ ತೀರ್ಮಾನಿಸಲಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಕ್ಸಲರು ಶರಣಾಗುವ ಸಾಧ್ಯತೆಯಿದೆ

ನಕ್ಸಲರ ಶರಣಾಗತಿಗೆ ಸರ್ಕಾರ ಸಿದ್ಧವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, “ನಕ್ಸಲರು ಶರಣಾಗಲಿ ಎಂದು ಕರೆ ನೀಡಿದ್ದೇನೆ ಹಾಗೂ ನಕ್ಸಲರ ಮನಃಪರಿವರ್ತನೆಯಾಗಿ ಶರಣಾಗುವ ಸಾಧ್ಯತೆಯಿದೆ. ಸಮಾಜದ ಮುಖ್ಯವಾಹಿನಿಗೆ ಅವರನ್ನು ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ” ಎಂದು ತಿಳಿಸಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರು ರಾಜ್ಯಸರ್ಕಾರದ ಕಮಿಷನ್ ಪ್ರಮಾಣ ಶೇ. 60ಕ್ಕೆ ತಲುಪಿದೆ ಎಂಬ ಆರೋಪದ ಬಗ್ಗೆ ಮಾತನಾಡಿ, “ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಕಮಿಷನ್ ಆರೋಪವನ್ನು ಗುತ್ತಿಗೆದಾರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಮಾಡಿದ್ದರು. ಬಿಜೆಪಿಯವರು ಕಮಿಷನ್ ತೆಗೆದುಕೊಂಡಿರುವುದಾಗಿ ಕೆಂಪಣ್ಣನವರು ಆರೋಪಿಸಿದ್ದರು” ಎಂದಷ್ಟೇ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...