ಹನಿಟ್ರ್ಯಾಪ್ | ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ: ಡಿ ಕೆ ಶಿವಕುಮಾರ್ ಮಾರ್ಮಿಕ ಮಾತು

Date:

ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಬೆಂಗಳೂರಿನ ಸದಾಶಿವನಗರದ ನಿವಾಸ ಹಾಗೂ ಭಾಗಮಂಡಲದ ಹೆಲಿಪ್ಯಾಡ್ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

48 ಶಾಸಕರು ಹನಿಟ್ರ್ಯಾಪ್ ಗೆ ಒಳಗಾಗಿದ್ದಾರೆ, ಸರ್ಕಾರದ ಸಚಿವರಿಗೆ ರಕ್ಷಣೆ ಇಲ್ಲವೇ ಎಂದು ಕೇಳಿದಾಗ, “ಯಾರು ಹೇಳಿದ್ದು ರಕ್ಷಣೆಯಿಲ್ಲವೆಂದು? ಸುಮ್ಮನೆ ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಬರುತ್ತಾರೆಯೇ? ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ. ನೀವು ಪ್ರತಿಕ್ರಿಯೆ ನೀಡಲಿಲ್ಲ ಎಂದರೆ ಯಾರಾದರೂ ಮಾತನಾಡಿಸುತ್ತಾರಾ? ಮಾಧ್ಯಮದವರು ಮಾತಾನಾಡಿಸಿದರೆ ನಾನು ಮಾತನಾಡಿಸುತ್ತೇನೆ” ಎಂದು ಮಾರ್ಮಿಕವಾಗಿ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಡಿದ್ದುಣ್ಣೋ ಮಹಾರಾಯ

ಹನಿಟ್ರ್ಯಾಪ್ ಹಿಂದೆ ಡಿ.ಕೆ.ಶಿವಕುಮಾರ್ ತಂಡವಿದೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಕೇಳಿದಾಗ, “ವಿಧಾನಸೌಧದಲ್ಲಿ ಅವರು ಏನೆಲ್ಲಾ ಮಾಡಿದ್ದರು ಎನ್ನುವುದು ಪೊಲೀಸ್ ದೂರಿನಲ್ಲಿ ಇದೆಯಲ್ಲವೇ? ಆರ್.ಅಶೋಕ್ ಗೆ, ಯಡಿಯೂರಪ್ಪ ಅವರಿಗೆ ಏನೋ ಆಯಿತು ಎಂದು ಬಿಜೆಪಿಯವರೇ ಮಾತನಾಡುತ್ತಿದ್ದರಲ್ಲವೇ? ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ. ಮಾಡಿದ್ದುಣ್ಣೋ ಮಾರಾಯ. ಅವರ ಪಕ್ಷದವರಿಗೆ ಹೇಳಿ ಒಂದೊಳ್ಳೆ ಆಸ್ಪತ್ರೆಗೆ ಸೇರಿಸಿ ಪರೀಕ್ಷೆ ಮಾಡಿಸಲಿ. ಅವರಿಗೆ ಒಂದಷ್ಟು ತೊಂದರೆಗಳಿವೆ” ಎಂದು ವ್ಯಂಗ್ಯವಾಡಿದರು.

ಕರ್ನಾಟಕದ ಬಂದ್ ಅವಶ್ಯಕತೆಯಿಲ್ಲ

ನಾಳಿನ (ಮಾ.22) ಕರ್ನಾಟಕ ಬಂದ್ ಬಗ್ಗೆ ಕೇಳಿದಾಗ, “ರಾಜ್ಯದ ಹಿತಕ್ಕೆ ಒಳ್ಳೆ ಕೆಲಸಕ್ಕೆ ಏನಿದ್ದರೂ ನಾವು ಬೆಂಬಲ ನೀಡುತ್ತೇವೆ. ಕಾನೂನಿನಲ್ಲಿ ಇರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು. ಯಾವ ಗಲಾಟೆಗಳನ್ನೂ ಮಾಡದೆ, ಯಾವ ಬಂದ್ ಕೂಡ ಮಾಡದೇ ದಯವಿಟ್ಟು ಎಲ್ಲರೂ ಶಾಂತರೀತಿಯಿಂದ ಇರಬೇಕು ಎಂದು ಮನವಿ ಮಾಡುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...