ಸ್ಥಳೀಯ ಸಂಸ್ಥೆಗಳ ಸದಸ್ಯರ ಗೌರವಧನ | ಆರ್ಥಿಕ ಇಲಾಖೆ ಸಹಮತಿ ಬಳಿಕ ಪರಿಷ್ಕರಣೆ: ರಹೀಂ ಖಾನ್

Date:

ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಗೌರವಧನವನ್ನು ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ತಿಳಿಸಿದರು.

ವಿಧಾನ ಪರಿಷತನಲ್ಲಿ ಡಿ.09ರಂದು ಸದಸ್ಯರಾದ ಸುನೀಲ್ ಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 255ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು,‌ “ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಧ್ಯಕ್ಷರು. ಉಪಾಧ್ಯಕ್ಷರು, ಸದಸ್ಯರು ಮತ್ತು ಮಹಾನಗರ ಪಾಲಿಕೆಗಳಲ್ಲಿನ ಮೇಯರ್, ಉಪಮೇಯರ್ ಮತ್ತು ಸದಸ್ಯರ ಗೌರವಧನವನ್ನು ಹೆಚ್ಚಳ ಮಾಡುವ ಕುರಿತು ಇತರ ರಾಜ್ಯಗಳ ಚುನಾಯಿತ ಪ್ರತಿನಿಧಿಗಳ ಗೌರವಧನದ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಗೌರವಧನ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ 20/09/2025ರ ಪತ್ರದನ್ವಯ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರಿಗೆ ಕೋರಲಾಗಿತ್ತು” ಎಂದರು.

“ಪ್ರಸ್ತುತ ಪೌರಾಡಳಿತ ನಿರ್ದೇಶನಾಲದ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿರುತ್ತದೆ. ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯ ಸಹಮತಿ ದೊರೆತ ನಂತರ ಗೌರವಧನ ಪರಿಷ್ಕರಿಸಲು ಅವಕಾಶವಾಗುತ್ತದೆ” ಎಂದು ಸಚಿವರು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿನ ಚುನಾಯಿತ ಸದಸ್ಯರಿಗೆ ಉಚಿತ ಬಸ್ ಪಾಸ್, ಪಿಂಚಣಿ ಹಾಗೂ ಟೋಲ್ ಫ್ರೀ ಪಾಸ್ ನೀಡುವ ಪ್ರಸ್ತಾವನೆ ನಗರಾಭಿವೃದ್ಧಿ ಇಲಾಖೆಯ ಪರಿಶೀಲನೆಯಲ್ಲಿ ಇರುವುದಿಲ್ಲ” ಎಂದು ಇದೆ ವೇಳೆ ಸಚಿವರು ಸ್ಪಷ್ಟನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...