ಆದಿಚುಂಚನಗಿರಿ ಶ್ರೀಗಳಿಗೆ ಅಪಚಾರವಾಗಿದ್ದರೆ ಕ್ಷಮೆ ಕೇಳುವೆ: ಹೆಚ್ ಡಿ ಕುಮಾರಸ್ವಾಮಿ

Date:

ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾನು ನೀಡಿದ್ದ ಹೇಳಿಕೆಯಿಂದ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತರುವ ಕೃಷಿ ಮೇಳದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವರು, “ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು ಇಲ್ಲ. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಶ್ರೀಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ” ಎಂದರು.

“ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ವಾತ್ಸಲ್ಯವಿತ್ತು. ನನ್ನಿಂದ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿವೆ ಎಂದು ಎಲ್ಲರಿಗೂ ಗೊತ್ತು. ಈ‌ ಬಗ್ಗೆ ನಮ್ಮ ನಿರ್ಮಲಾನಂದನಾಥ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತಾಡಿದ್ದಕ್ಕೆ ಇನ್ಯಾರೋ ಮಾತಾಡಿದ್ದಾರೆ. ನಮ್ಮ ಸ್ವಾಮೀಜಿಯಷ್ಟು ಓದಿಕೊಂಡವರು, ಶಿಕ್ಷಣ ಪಡೆದವರು ಮತ್ತೊಬ್ಬರು ಇಲ್ಲ. ಸ್ವಾಮೀಜಿಗಳು ಅವರದ್ದೆ ಆದ ಕಲ್ಪನೆಗಳನ್ನು ಹೊಂದಿರುತ್ತಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಿದ್ದೆ” ಎಂದರು.

“ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು” ಎಂದು ಇತ್ತೀಚೆಗೆ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...