ದೇವೇಗೌಡರ ಪತ್ರ ಪುರಸ್ಕರಿಸಿ, ‌ಮಾತುಕತೆಗೆ ಮೋದಿ ಆಹ್ವಾನಿಸುತ್ತಾರೆಂದು ನಂಬಿರುವೆ: ಸಿದ್ದರಾಮಯ್ಯ

Date:

  • ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪ್ರಧಾನಿಗೆ ಪತ್ರ ಬರೆದ ದೇವೇಗೌಡ
  • ‘ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು’

ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿಗಳಾದ ಹೆಚ್‌ ಡಿ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ವಿವಾದ ಮತ್ತು ಭಿನ್ನಾಭಿಪ್ರಾಯ ಪರಿಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪ್ರಧಾನಿಗಳಿಗೆ ದೇವೇಗೌಡರು ಪತ್ರ ಬರೆದಿರುವುದನ್ನು ಸ್ವಾಗತಿಸಿ ಟ್ವೀಟ್‌ ಮಾಡಿದ್ದಾರೆ.

“ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್ ಡಿ ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾರು ಹಸಿದಿದ್ದರು, ಯಾವುದು ಹಳಸಿತ್ತು?

“ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...